ಗಾಲಿ ರೆಡ್ಡಿ ಬಿಡುಗಡೆ ಭಾಗ್ಯ ಸದ್ಯಕ್ಕಂತೂ ಇಲ್ಲ

ಎಎಂಸಿ ಹಾಗೂ ಡೆಕ್ಕನ್ ಗಣಿ ಕಪನಿ ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಾಲಿ ರೆಡ್ಡಿ ಜಾಮೀನು ಅರ್ಜಿ ವಿಚಾರಣೆಯನ್ನು ಮಂಗಳವಾರ(ಏ.17) ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು
ಹೆಚ್ಚಿನ ವಿಚಾರಣೆ ಅಗತ್ಯತೆ ಇರುವುದರಿಂದ ಆರೋಪಿಗಳಿಗೆ ಈ ಸಂದರ್ಭದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸಿಬಿಐ ಕೋರ್ಟ್ ನ್ಯಾಯಮೂರ್ತಿಗಳು ಆದೇಶ ಹೊರಡಿಸಿಬಿಟ್ಟರು.
ಸೆ.5 ರಂದು ಬಳ್ಳಾರಿ ನಿವಾಸದಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಗಾದ ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದಿನ ಚಂಚಲಗೂಡಾ ಜೈಲಿನಲ್ಲಿ ಇರಿಸಲಾಗಿತ್ತು. ಬಾಡಿ ವಾರೆಂಟ್ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ವರ್ಗಾಯಿಸಲಾಗಿದೆ.
ಗಾಲಿ ರೆಡ್ಡಿ ಸುಮಾರು ಐದಾರು ಬಾರಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಜಾಗೊಂಡಿದೆ. ತಮ್ಮ ಮೇಲಿನ ಆರೋಪ ನಿರಾಧಾರವಾಗಿದೆ. ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಗೆ ಮೇಲ್ಮನವಿ ಕೂಡಾ ಸಲ್ಲಿಸಿದ್ದಾರೆ.












Click it and Unblock the Notifications