ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

DIT ಹೋಗಿ DEITY ಬಂತು ಡುಂಡುಂ

By Srinath
|
Google Oneindia Kannada News

depat-information-technology-renamed-deity
ನವದೆಹಲಿ, ಏ.19: ವಿದ್ಯುನ್ಮಾನ (ಎಲೆಕ್ಟ್ರಾನಿಕ್ಸ್) ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ-ಮಾನ್ಯತೆ ನೀಡುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಗೆ (DIT) ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ- (DEITY)' ಎಂದು ಮರುನಾಮಕರಣ ಮಾಡಲಾಗಿದೆ.

ಈ ಮರುನಾಮಕರಣ ಪ್ರಕ್ರಿಯೆಗೆ ಕೇಂದ್ರ ಸಂಪರ್ಕ ಖಾತೆ ಸಚಿವ ಕಪಿಲ್ ಸಿಬಲ್ ಇಂದು ಗುರುವಾರ ವಿದ್ಯುಕ್ತ ಚಾಲನೆ ನೀಡಲಿದ್ದಾರೆ ಎಂದು ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಬುಧವಾರ ತಿಳಿಸಿದೆ.

2000ನೇ ಇಸ್ವಿಯಲ್ಲಿ DIT ರಾಷ್ಟ್ರದ ರಾಜಧಾನಿ ವ್ಯಾಪ್ತಿಯಲ್ಲಿ ಅಸ್ತಿತ್ವಕ್ಕೆ ಬಂದಿತು. ಅದಕ್ಕೂ ಮುನ್ನ ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿತ್ತು. ಆದರೆ 2001ರ ಡಿಸೆಂಬರಿನಲ್ಲಿ ದೂರಸಂಪರ್ಕ ಇಲಾಖೆ ಮತ್ತು ಅಂಚೆ ಇಲಾಖೆ ವಿಲೀನಗೊಂಡ ಪರಿಣಾಮ DIT ಈಗ DEITY ಆಗಿ ಮಾರ್ಪಟ್ಟಿದೆ.

ಆದರೆ ಇತ್ತೀಚಿನ ವರ್ಷಗಳಲ್ಲಿ ವಿದ್ಯುನ್ಮಾನ (ಎಲೆಕ್ಟ್ರಾನಿಕ್ಸ್) ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಲಭಿಸುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಇದನ್ನು ಹೋಗಲಾಡಿಸಲು ಕಳೆದ ಅಕ್ಟೋಬರಿನಲ್ಲಿ ಹೊಸ ವಿದ್ಯುನ್ಮಾನ (ಎಲೆಕ್ಟ್ರಾನಿಕ್ಸ್) ನೀತಿಯನ್ನು ರೂಪಿಸಲಾಗಿದೆ.

English summary
The Department of Information Technology (DIT) has been renamed as the Department of Electronics and IT (DEITY) to reflect the increasing focus of the government on the electronics sector. Communications and IT Minister Kapil Sibal will preside over the renaming function of the Department in New Delhi today (April 19).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X