• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂಟರ್ ನೆಟ್ ಮೇಲೆ ಸೆನ್ಸಾರ್! ವಾಟ್ ನಾನ್ಸೆನ್

By Mahesh
|

ಬೆಂಗಳೂರು, ಏ.22: ಅಂತರ್ಜಾಲದ ಮೇಲಿನ ಸೆನ್ಸಾರ್ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ಸ್ವತಂತ್ರ ತಂತ್ರಾಂಶ ಆಂದೋಲನ(fsmk) ಸಂಘಟನೆ ಆಯೋಜಿಸಿದ್ದ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಟೌನ್ ಹಾಲ್ ಎದುರು ಶನಿವಾರ (ಏ.21) ನಡೆದ ಧರಣಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಅಂತರ್ಜಾಲದಲ್ಲಿನ ವ್ಯಕ್ತಿಗತ ವಿವರಗಳನ್ನು ಸೆನ್ಸಾರ್ ಮಾಡುವ ಕಾನೂನನ್ನು ಸರ್ಕಾರ ರೂಪಿಸಿದೆ. ಇದರಿಂದಾಗಿ ಫೇಸ್‌ಬುಕ್‌ನಂಥ ಸಾಮಾಜಿಕ ತಾಣಗಳಲ್ಲಿನ ಬರಹಗಳಿಗೆ ಸೆನ್ಸಾರ್, ಸ್ಕೈಪಿಯಂತಹ ಆನ್‌ಲೈನ್ ಸಂಭಾಷಣೆಗಳನ್ನು ಕದ್ದಾಲಿಸಲು, ಟ್ವಿಟ್ಟರ್ ಅಥವಾ ಬ್ಲಾಗ್‌ಗಳಲ್ಲಿನ ಬರಹಗಳನ್ನು ನಿಯಂತ್ರಣ, ಆನ್‌ಲೈನ್ ಚಟುವಟಿಕೆಗಳ ಮೇಲೆ ಬೇಹುಗಾರಿಕೆ ನಡೆಸಲು ಸಾಧ್ಯವಾಗುತ್ತದೆ ಎಂದು ಧರಣಿ ನಿರತರು ಆರೋಪಿಸಿದರು.

ಇಂಟರ್ನೆಟ್ ಸೆನ್ಸಾರ್ ರದ್ದು ಪಡಿಸಲು ಆಗ್ರಹಿಸಿ "ಅಸ್ಪಷ್ಟ ನಿಯಮಗಳನ್ನು ಬಳಸಿಕೊಂಡು ಬ್ಲಾಗ್ ಬರೆಯುವ ನಮ್ಮ ಹಕ್ಕನ್ನು ಕಿತ್ತುಕೊಳ್ಳಬೇಡಿ" ಎಂದು ಫಲಕ ಹಿಡಿದು ಪ್ರತಿಭಟನೆ ನಡೆಲಾಯಿತು.

ನಮ್ಮ ಫೇಸ್ ಬುಕ್ ಬರಹಗಳನ್ನು ಸೆನ್ಸಾರ್ ಮಾಡಲು, ಸ್ಕೈಪ್ ನಂಥಹ ಆನ್ ಲೈನ್ ಮೂಲಕ ನಾವು ನಡೆಸುವ ಸಂಭಾಷಣೆಗಳನ್ನು ಕದ್ದು ಕೇಳಲು, ನಾವು ಮಾಡುವ twitter ಅಥವಾ ಬ್ಲಾಗ್ ಬರಹಗಳನ್ನು ನಿಯಂತ್ರಿಸಲು, ಅಥವಾ ನಾವು ಆನ್ ಲೈನ್ ನಲ್ಲಿ ಸಂಗ್ರಹಿಸಿಡುವ ಖಾಸಗಿ ಫೋಟೋ ಗಳನ್ನು ಮತ್ತು ಡಾಕುಮೆಂಟ್ ಗಳನ್ನು ತೆಗೆದುಕೊಳ್ಳುವ, ಅಥವಾ ನಮ್ಮ ಮೊಬೈಲ್ ಫೋನ್ ಗಳನ್ನು ಬಳಸಿಕೊಂಡು ನಾವಿರುವ ನೆಲೆಯನ್ನು ಟ್ರ್ಯಾಕ್ ಮಾಡಿ ತಿಳಿಯಲು ಮತ್ತು ನಮ್ಮೆಲ್ಲ ಆನ್ ಲೈನ್ ಚಟುವಟಿಕೆಗಳ ಮೇಲೆ ಬೇಹುಗಾರಿಕೆ ನಡೆಸಲು ಇದರಿಂದ ಸಾಧ್ಯವಾಗುತ್ತದೆ.

ಅಸ್ಪಷ್ಟ ಮತ್ತು ನ್ಯೂನ್ಯತೆಯ ಕಾನೂನುಗಳನ್ನು ಬಳಸಿಕೊಂಡು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ಸರ್ಕಾರ ನಮ್ಮಿಂದ ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

2011 ಎಪ್ರಿಲ್ 11 ರಂದು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ (ಮಧ್ಯಸ್ಥವರ್ತಿಗಳ ಮಾರ್ಗದರ್ಶಿ) ನಿಯಮಾವಳಿ, 2011 ನ್ನು ಅಧಿಸೂಚನೆ ಹೊರಡಿಸಿತು. ಈ ಅಧಿಸೂಚನೆಯ ಮಾರ್ಗದರ್ಶಿ ತತ್ವಗಳನ್ನು ಎಲ್ಲ ಇಂಟರ್ನೆಟ್ ಸಂಬಂಧಿತ ಕಂಪನಿಗಳು ಪಾಲಿಸಬೇಕೆಂದು ಠರಾವು ಹೊರಡಿಸಿತು.

ಈ ನಿಯಮಾವಳಿಗಳ ಪರಿಣಾಮವೇನೆಂದರೆ:

1 . ಖಾಸಗಿ ಕಂಪನಿಗಳ ಮೂಲಕ ಸೆನ್ಸಾರ್ ವಿಧಿಸಿ ಭಾರತದ ಸಂವಿಧಾನದಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ದಮನ ಮಾಡುವುದು.

2 . ಸರ್ಕಾರಿ ಏಜೆನ್ಸಿ ಗಳಿಗೆ ಇಂಟರ್ನೆಟ್ ಬಳಕೆದಾರರ ಎಲ್ಲ ಆನ್ ಲೈನ್ ಮಾಹಿತಿಗಳನ್ನು ನೀಡುವ ಮೂಲಕ ನಾಗರೀಕರ ಖಾಸಗಿ ಬದುಕಿನ ಹಕ್ಕನ್ನು ದಮನ ಮಾಡುವುದು.

3 . ಭಾರತದಲ್ಲಿ ಇಂಟರ್ನೆಟ್ ಬಳಕೆ ಹರಡುವುದನ್ನು ಇದು ತಪ್ಪಿಸುತ್ತದೆ ಮತ್ತು ಇದರಿಂದಾಗಿ ಆರ್ಥಿಕ ಬೆಳವಣಿಗೆ ಕುಂಠಿತವಾಗುತ್ತದೆ.

4 . ವಿವಿಧ ಐ.ಟಿ. ಸಂಬಂಧಿತ ಕೈಗಾರಿಕೆಗಳು ಮತ್ತು ಸೇವೆಗಳ (ವಿಶೇಷವಾಗಿ ಸೈಬರ್ ಕೆಫೆಗಳು, ಸರ್ಚ್ ಇಂಜಿನ್ ಗಳು ಮತ್ತು ಬ್ಲಾಗರ್ ಗಳು) ಬೆಳವಣಿಗೆಯನ್ನು ತಡೆಗಟ್ಟುತ್ತದೆ.

ಇದಲ್ಲದೆ, ಬಳಕೆದಾರರ ದತ್ತಾಂಶ ಮಾಹಿತಿಯನ್ನು ಕಡ್ಡಾಯವಾಗಿ ಸಂಗ್ರಹಿಸಿಡುವ ಜವಾಬ್ದಾರಿ ಇಂಟರ್ನೆಟ್ ಸೇವೆ ಒದಗಿಸುವ ಕಂಪನಿಗಳ ಮೇಲೆ ಬರುವುದರಿಂದ, ಬಳಕೆದಾರರ ದೊಡ್ಡ ಮತ್ತು ದುಬಾರಿ ಮಾಹಿತಿ ತಾಣವನ್ನು ಸಂಗ್ರಹಿಸಿಡಲಾಗುತ್ತದೆ.

ಈ ಮಾಹಿತಿಯನ್ನು ರಹಸ್ಯವಾಗಿ, ಯಾವುದೇ ನ್ಯಾಯಾಲಯದ ಗಮನಕ್ಕೂ ತರದೇ, ಸರ್ಕಾರಕ್ಕೆ ಮತ್ತು ಅದರ ಏಜೆನ್ಸಿಗಳಿಗೆ ರವಾನಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸ್ವತಂತ್ರ ತಂತ್ರಾಂಶ ಆಂದೋಲನ ಸಂಸ್ಥೆಯು ಎಲ್ಲ ಬ್ಲಾಗರ್ ಗಳು ಮತ್ತು ಆನ್ ಲೈನ್ ಬಳಕೆದಾರರು, ಇನ್ನೆಲ್ಲ ಜನತೆ ಈ ನಿಯಮಾವಳಿ ರದ್ದುಪಡಿಸಲು ಆಗ್ರಹಿಸಬೇಕೆಂದು ಕರೆ ನೀಡುತ್ತದೆ. ಈ ಸಂಬಂಧ ನಿಯಮಾವಳಿ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಬೇಕಾಯಿತು ಎಂದು ಜೈಕುಮಾರ್ ಹೇಳಿದರು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕರ್ನಾಟಕ ಸ್ವತಂತ್ರ ತಂತ್ರಾಂಶ ಆಂದೋಲನ ಸಂಸ್ಥೆ ವೆಬ್ ತಾಣ ನೋಡಿ

* ಜೈಕುಮಾರ್ (ಮೊ:96204 64215)

* ವಿಘ್ನೇಶ್ ಪ್ರಭು (ಮೊ:9535321976)

* ರಘುರಾಮ್ ((ಮೊ:9591042333)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Over 100 people participated in the protests, including IT workers and students from engineering colleges at Town hall Bangalore on Apr.21. The protest was organised by the Free Software Movement of Karnataka (FSMK), in collaboration with the Software Freedom Law Centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more