ಈಶಾನ್ಯ ಮೂಲದ ಮತ್ತೊಬ್ಬ ವಿದ್ಯಾರ್ಥಿ ಸಾವು

North East student found dead in B'lore
ಬೆಂಗಳೂರು, ಮೇ.4: ಆಚಾರ್ಯ ಇನ್ಸ್ ಸ್ಟಿಟ್ಯೂಟ್ ನ ಆರ್ಕಿಟೆಕ್ಚರ್ ವಿಭಾಗದ ವಿದ್ಯಾರ್ಥಿ ಮಣಿಪುರ ಮೂಲದ ರಿಚರ್ಡ್ ಸಾವಿನ ಪ್ರಕರಣ ಇತ್ಯರ್ಥವಾಗುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈಶಾನ್ಯ ರಾಜ್ಯ ಮೂಲದ 24 ವರ್ಷ ವಯಸ್ಸಿನ ಹೈಸ್ನಾಮ್ ಜಾಕಿಯೊ ಮೃತಪಟ್ಟ ವಿದ್ಯಾರ್ಥಿ. ಮೈಕೋ ಲೇಔಟ್ ಠಾಣೆ ವ್ಯಾಪ್ತಿಯ ನಿವಾಸವೊಂದರಲ್ಲಿ ಜಾಕಿಯೊ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಆದರೆ, ಆತನ ಸಾವಿನ ಸರಿಯಾದ ಕಾರಣ ತಿಳಿದುಬಂದಿಲ್ಲ. ಲಿವ್ ಇನ್ ಸಂಬಂಧ ಹೊಂದಿದ್ದ ಜಾಕಿಯೊ ತನ್ನ ಗೆಳತಿಯೊಡನೆ ಜಗಳವಾಡಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಆದರೆ, ಮರಣೋತ್ತರ ಪರೀಕ್ಷೆ ಮುಗಿಯುವ ತನಕ ಏನನ್ನೂ ಹೇಳಲಾಗದು ಎಂದು ಮೈಕೋ ಲೇಔಟ್ ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಇತ್ತೀಚೆಗೆ ಆಚಾರ್ಯ ಕಾಲೇಜಿನ ವಿದ್ಯಾರ್ಥಿ ರಿಚರ್ಡ್ ಲೊಯ್ತಿಯಮ್ ತನ್ನ ರೂಮ್ ಮೇಟ್ ಜೊತೆ ಕಿತ್ತಾಡಿಕೊಂಡು ಸಾವನ್ನಪ್ಪಿದ್ದರು. ತನಿಖೆ ಪ್ರಗತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಮರಣೋತ್ತರ ಪರೀಕ್ಷೆ ವರದಿ ಹೊರ ಬಿದ್ದರೂ ರಿಚರ್ಡ್ ಸಾವಿನ ನಿಖರ ಕಾರಣ ತಿಳಿಯದೆ ಪೊಲೀಸರು ಮುಂದಿನ ಕ್ರಮ ಜರುಗಿಸಿಲ್ಲ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+