ಮೇ 28ಕ್ಕೆ ಹುಬ್ಬಳ್ಳಿಗೆ ರಾಹುಲ್ ಗಾಂಧಿ ಆಗಮನ

Rahul Gandhi
ಹುಬ್ಬಳ್ಳಿ, ಮೇ.7: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ತುಮಕೂರಿಗೆ ಬಂದು ಹೋದ ಬೆನ್ನಲ್ಲೇ ಈಗ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ಬರಲಿದ್ದಾರೆ.

ಮೇ 28,29 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಣಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದರು.

ಭೇಟಿ ಮುಂದೂಡಿಕೆ: ರಾಹುಲ್ ಗಾಂಧಿ ರಾಜ್ಯ ಪ್ರವಾಸದ ದಿನಾಂಕ ಬದಲಾಗಿದ್ದು. ಜೂನ್ ಮೊದಲ ವಾರದಲ್ಲಿ ರಾಹುಲ್ ಅಗಮಿಸುವ ನಿರೀಕ್ಷೆಯಿದೆ ಎಂದು ಕೆಪಿಸಿಸಿ ಮೂಲಗಳು ಹೇಳಿದೆ.

ರಾಹುಲ್ ಗಾಂಧಿ ಭೇಟಿಗೆ ಮುನ್ನ ಕರ್ನಾಟಕ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಅಂಬರೀಷ್ ಅವರಿಗೆ ಉಪಾಧ್ಯಕ್ಷ ಸ್ಥಾನ ಕಲ್ಪಿಸಿರುವುದು, ಬರ ಪರಿಹಾರದ ಬಗ್ಗೆ ಕಾಂಗ್ರೆಸ್ ನಿಲುವು ಮುಂತಾದ ವಿಷಯಗಳು ಸದ್ಯದ ಚರ್ಚಿತವಾಗುತ್ತಿದೆ.

ಹುಬ್ಬಳ್ಳಿ ಆರೆಸ್ಸೆಸ್ ಸಂಗಮ ಸಭೆ ನಡೆದ ನಂತರ ಪ್ರಥಮ ಬಾರಿಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಣಿ ನಡೆಯುತ್ತಿದೆ. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹೊಸ ಹುರುಪಿನೊಂದಿಗೆ ಪಕ್ಷದ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ರಾಹುಲ್ ಭೇಟಿ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಲು ಸಜ್ಜಾಗಿದೆ. ಉತ್ತರ ಕರ್ನಾಟಕದ ಜನತೆಯನ್ನು ತನ್ನತ್ತ ಸೆಳೆದುಕೊಂಡು ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರ ಸ್ಥಾಪಿಸಲು ಕಾಂಗ್ರೆಸ್ ಉದ್ದೇಶಿಸಿದೆ ಎನ್ನಲಾಗಿದೆ.

ಆದರೆ, ಉತ್ತರ ಪ್ರದೇಶದಲ್ಲಿ ಭಾರಿ ಮುಖಭಂಗ ಅನುಭವಿಸಿದ ರಾಹುಲ್ ಗಾಂಧಿ, ಕರ್ನಾಟಕಕ್ಕೆ ಬಂದು ಏನು ತಾನೇ ಮಾಡಲು ಸಾಧ್ಯ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+