ಜಾರ್ಖಂಡ್ ಮುಖ್ಯಮಂತ್ರಿ ಹೆಲಿಕಾಪ್ಟರ್ ಅಪಘಾತಕ್ಕೆ ತುತ್ತು
ರಾಂಚಿ,
ಮೇ 9: ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿ ಅರ್ಜುನ್ ಮುಂಡಾ ಮತ್ತು ಅವರ ಪತ್ನಿ ಮೀರಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ landing ವೇಳೆ ಬುಧವಾರ 12 ಗಂಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಇಡೀ ಹೆಲಿಕಾಪ್ಟರ್ ನಜ್ಜುಗುಜ್ಜಾಗಿದೆ. id="toptextpromo">ಅಪಘಾತಕ್ಕೀಡಾದ
ಮುಖ್ಯಮಂತ್ರಿ ಅರ್ಜುನ್ ಮುಂಡಾ ದಂಪತಿ ಸುರಕ್ಷಿತರಾಗಿದ್ದಾರೆ. ಆದರೆ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 30 ಅಡಿ ಎತ್ರರದಿಂದ ಹೆಲಿಕಾಪ್ಟರ್ ಸುರುಳಿಯಂತೆ ತಿರುಗಿ ಬಿದ್ದಿದೆ. id='are-slot-1' class='oiad oi-axt oiadv'> id='top-searched-articles'>ಗಾಯಗೊಂಡ
ಮುಖ್ಯಮಂತ್ರಿ ಅರ್ಜುನ್ ಮುಂಡಾ ಅವರನ್ನು ರಾಂಚಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ. ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. landingಗೆ ಮುನ್ನ ತಾಂತ್ರಿಕ ಅಡಚಣೆ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.











Click it and Unblock the Notifications