ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

By Mahesh
|
Google Oneindia Kannada News

ಬೆಂಗಳೂರು, ಮೇ.11: ಓಬಳಾಪುರಂ ಗಣಿ ಸಂಸ್ಥೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಎಂಡಿ ಶ್ರೀನಿವಾಸ್ ಅವರಿಗೆ ಹೈದರಾಬಾದಿನ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ(ಮೇ.11) ಸಂಜೆ ಜಾಮೀನು ಮಂಜೂರು ಮಾಡಿದೆ. ಆದರೆ, ಗಾಲಿ ರೆಡ್ಡಿಗೆ ಬಿಡುಗಡೆ ಭಾಗ್ಯ ಒದಗಿ ಬಂದಿಲ್ಲ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬೇಲ್ ಪಡೆದಿರುವ ಜನಾರ್ದನ ರೆಡ್ಡಿ ಅವರು 5 ಲಕ್ಷ ಶ್ಯೂರಿಟಿ ನೀಡಬೇಕು. ದೇಶಬಿಟ್ಟು ಹೊರಗೆ ಹೋಗಬಾರದು ಎಂದು ನಾಂಪಲ್ಲಿ ಸಿಬಿಐ ನ್ಯಾಯಾಲಯ ಆದೇಶ ನೀಡಿದೆ.

ಚಂಚಲಗುಡ ಜೈಲಿನಲ್ಲಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಾಡಿ ವಾರೆಂಟ್ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಯಿತು. ಎಎಂಸಿ(ಅಸೋಸಿಯೇಟೆಡ್ ಮೈನಿಂಗ್ ಕಂಪನಿ) ಹಾಗೂ ಡೆಕ್ಕನ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಇನ್ನೂ ವಿಚಾರಣೆ ಜಾರಿಯಲ್ಲಿದೆ. ಮೇ.23ರವರೆಗೂ ಗಾಲಿ ಜನಾರ್ದನ ರೆಡ್ಡಿ ಹಾಗೂ ಮೆಹಫುಜ್ ಅಲಿ ಖಾನ್ ಅವರ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.

English summary
CBI special court in Nampalli, Hyderabad today(May.11) granted bail to Gali Janardhana reddy in OMC illegal mining case. Bangalore CBI court again rejected bail plea by former minister Gali Reddy in AMC case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X