ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆಗೆ ಆದೇಶ

ಮೇಲಿನ ಪ್ರಕರಣಗಳ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕೆಂದು ಕೋರಿ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆಯನ್ನು ಮೇ 4ಕ್ಕೆ ಪೂರ್ಣಗೊಳಿಸಿದ್ದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯ ಹಾಗೂ ಅಫ್ತಾಬ್ ಆಲಂ, ಸ್ವತಂತ್ರ ಕುಮಾರ್ ಅವರ ತ್ರಿಸದಸ್ಯ ಅರಣ್ಯಪೀಠ, ಇಂದು ತೀರ್ಪು ಪ್ರಕಟಿಸಿತು.
ಈ ಪ್ರಕರಣಗಳ ತನಿಖೆಯನ್ನು ಲೋಕಾಯುಕ್ತ ನಡೆಸದಂತೆಯೂ ತಡೆ ನೀಡಲಾಗಿದೆ. ಈ ತನಿಖೆಯನ್ನು ಸಿಬಿಐನ ಎಡಿಜಿಪಿಗೆ ವಹಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿತು.
ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಜಿಂದಾಲ್ ಸ್ಟೀಲ್ ವರ್ಕ್ ಮತ್ತು ಸೌತ್ ವೆಸ್ಟ್ ಮೈನಿಂಗ್ ಕಂಪನಿಯಿಂದ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ ಹಾಗೂ ಸೋಹನ್ ಕುಮಾರ್ ಒಡೆತನದ 'ಪ್ರೇರಣಾ ಶಿಕ್ಷಣ ಟ್ರಸ್ಟ್" ಹಾಗೂ 'ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್" ಸಂಸ್ಥೆಗಳು ದೇಣಿಗೆ ಪಡೆದ ಆರೋಪದ ಕುರಿತು ಹಾಗೂ ರಾಚೇನಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಗಳ ಕುರಿತಾಗಿ ಸಿಬಿಐಯಂತಹ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಶಿಫಾರಸು ಮಾಡಿ ಸಿಇಸಿ ಎ.20ರಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.












Click it and Unblock the Notifications