ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬರುವೆ: ಯಡಿಯೂರಪ್ಪ
ಮೈಸೂರು,
ಮೇ.11: ಗಣಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ನನಗೆ ಸಂಕಟ ಇದೆ ಎಂಬ ಅರಿವಿತ್ತು. ನಾನು ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬರುತ್ತೇನೆ ಎಂದು ನಂಜನಗೂಡಿನಲ್ಲಿ ಶುಕ್ರವಾರ ಮಧ್ಯಾಹ್ನ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. id="toptextpromo">'2000
ದಿಂದ 2011ರ ವರೆಗೂ ನಡೆದಿರುವ ಗಣಿ ಅಕ್ರಮದ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಲಿ. ಈ ಬಗ್ಗೆ ಪ್ರಧಾನಿ ಮನ ಮೋಹನ್ ಸಿಂಗ್ ಅವರಿಗೆ ಮನವಿ ಮಾಡುತ್ತೇನೆ. ' ಎಂದು ಯಡಿಯೂರಪ್ಪ ಹೇಳಿದರು. id='are-slot-1' class='oiad oi-axt oiadv'> id='top-searched-articles'>'ಗಣಿ
ಲೂಟಿ ಮಾಡಿದ ಎಲ್ಲರಿಗೂ ಶಿಕ್ಷೆಯಾಗಲಿ. ಕೇವಲ ನನ್ನ ಅವಧಿಯ ತನಿಖೆ ಏಕೆ? ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಆದರೆ, ಜನರ ಆಶೀರ್ವಾದ ನನ್ನ ಮೇಲಿದೆ. ನಾನು ಆರೋಪಮುಕ್ತನಾಗಿ ಹೊರಬರುತ್ತೇನೆ. ನಾಡಿನಾದ್ಯಂತ ಮತ್ತೊಮ್ಮೆ ಪ್ರವಾಸ ಕೈಗೊಳ್ಳುತ್ತೇನೆ. ಅಭಿಮನ್ಯುವಿನಂತೆ ಚಕ್ರವ್ಯೂಹ ಪ್ರವೇಶಿಸುವುದು ಮಾತ್ರವಲ್ಲ ಹೊರ ಬರುವ ಮಾರ್ಗ ಕೂಡಾ ಗೊತ್ತಿದೆ' ಎಂದು ಯಡಿಯೂರಪ್ಪ ಹೇಳಿದ್ದಾರೆ.











Click it and Unblock the Notifications