ಸಂಪುಟ ವಿಸ್ತರಣೆ: ಬಿಎಸ್‌ವೈ ಬೆಂಬಲಿಗರಿಗೆ ಕೊಕ್ ಇಲ್ಲ

dvs-cabinet-expansion-bsy-supporters-not-worry
ಬೆಂಗಳೂರು, ಮೇ 12: ಅತ್ತ ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆ ಆದೇಶ ಹೊರಬೀಳುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಸ್ಪಷ್ಟ ರೂಪಪಡೆಯುತ್ತಿದೆ. ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಚಾಲನೆ ಸಿಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಇದರಿಂದ ಸಚಿವ ಸ್ಥಾನ ಆಕಾಂಕ್ಷಿಗಳು ಕಂಗಾಲು ಆಗುವುದು ಬೇಡ ಎಂಬ ಸಂದೇಶ ರವಾನೆಯಾಗಿದೆ.

ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರು ಸೋಮವಾರ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಇನ್ನು ಪಕ್ಷದ ರಾಜ್ಯಾಧ್ಯಕ್ಷ ಈಶ್ವರಪ್ಪ ಅವರು ವಿದೇಶ ಪ್ರವಾಸದಿಂದ ಭಾನುವಾರ ವಾಪಸಾಗುತ್ತಿದ್ದು, ಸಂಪುಟ ವಿಸ್ತರಣೆ ಸೇರಿದಂತೆ ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆ ಆದೇಶಿಸಿರುವ ಬಗ್ಗೆ ಸದಾನಂದರ ಜತೆ ಹೈಕಮಾಂಡ್ ಜತೆ ಚರ್ಚಿಸುವ ಸಾಧ್ಯತೆ ಇದೆ.

ಬಣ ರಾಜಕೀಯದಲ್ಲಿ ಬಿಜೆಪಿ ಬಸವಳಿದಿದ್ದರೂ ಸಂಪುಟ ವಿಸ್ತರಣೆಯ ಮೂಲಕ ಮುಂದಿನ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಕ್ಷದ ನಾಯಕರು ಪ್ರಯತ್ನಶೀಲರಾಗಿದ್ದಾರೆ. ಕಾನೂನು ಸಂಕಷ್ಟಕ್ಕೆ ಸಿಕ್ಕಿರುವ ಬಿಎಸ್‌ವೈ ಅವರನ್ನು ಮೂಲೆಗುಂಪು ಮಾಡುವುದು ಒಳ್ಳೆಯ ರಾಜಕೀಯ ನಡೆಯಾಗದು ಎಂಬ ನಿರ್ಧಾರಕ್ಕೆ ಬಂದಿರುವ ಈ ನಾಯಕರು ಯಡಿಯೂರಪ್ಪ ಅವರ ಬೆಂಬಲಿಗ ಸಚಿವರನ್ನು ಸಂಪುಟದಿಂದ ಕೈಬಿಡುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಈ ನಡುವೆ ವೀರಶೈವ ಮತಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿ ಜಗದೀಶ್ ಶೆಟ್ಟರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬಹುದೆಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+