ಯಡಿಯೂರಪ್ಪ ಪಕ್ಷ ಬಿಡುವುದಿಲ್ಲ: ಸದಾನಂದ ಗೌಡ

CM DV Sadananda Gowda
ಬೆಂಗಳೂರು, ಮೇ.14: ಬೆಂಗಳೂರಿನ ರಾಜಕೀಯ ವಲಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ 4 ರ ವೇಳೆಗೆ ರೇಸ್ ಕೋರ್ಸ್ ರಸ್ತೆಯಿಂದ ಮಿಂಚೊಂದು ಅಪ್ಪಳಿಸುವ ನಿರೀಕ್ಷೆಯಿದೆ. ಆದರೆ, ಸಿಡಿಲು ಬಡಿತ, ಸಾರ್ವಜನಿಕರಿಗೆ ಹಾನಿಯಾಗುವ ಯಾವ ಮುನ್ಸೂಚನೆಗಳು ಇಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಸದಾನಂದ ಗೌಡರು ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಅವರು ಪಕ್ಷ ತೊರೆಯುವುದಿಲ್ಲ ಇದು ಅವರು ಕಟ್ಟಿ ಬೆಳೆಸಿದ ಪಕ್ಷ. ಅವರ ಬೇಡಿಕೆಗಳು ಏನಿದ್ದರೂ ಹೈಕಮಾಂಡ್ ಜೊತೆ ಚರ್ಚಿಸಿ ಬಗೆಹರಿಸಿಕೊಳ್ಳಲಿದ್ದಾರೆ. ಯಡಿಯೂರಪ್ಪ ಆಗಲಿ ಅವರ ಬೆಂಬಲಿತ ಶಾಸಕರಾಗಲಿ ನೀಡುವ ರಾಜೀನಾಮೆ ಸ್ವೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಅರುಣ್ ಜೇಟ್ಲಿ ಸಂಧಾನ ಸಫಲ: ಯಡಿಯೂರಪ್ಪ ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಹಿರಿಯ ನಾಯಕ ಅರುಣ್ ಜೇಟ್ಲಿ ಅವರು ಯಡಿಯೂರಪ್ಪ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ (ಸಮಯ 3.28 ನಿಮಿಷ). ಹೀಗಾಗಿ ಯಡಿಯೂರಪ್ಪ ಅವರು ಪಕ್ಷ ತೊರೆಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಸಂಜೆ 4 ಗಂಟೆಗೆ ಕೇವಲ ಔಪಚಾರಿಕವಾಗಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಪಕ್ಷ ಬಿಡುವುದಿಲ್ಲ ಎಂದು ಯಡಿಯೂರಪ್ಪ ಘೋಷಿಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+