ಬಿಎಸ್‌ವೈ: ಶಿವಮೊಗ್ಗದಲ್ಲಿ ಸಿಬಿಐ ಪರಿಶೀಲನೆ ಅಂತ್ಯ

ಬೆಂಗಳೂರು, ಮೇ 16: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಸಿಬಿಐ ಅಧಿಕಾರಿಗಳು ಬುಧವಾರ ಯಡಿಯೂರಪ್ಪ ಅವರ ಅಳಿಯ ಉದಯ್ ಕುಮಾರ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಮೈತ್ರಿ ನಿವಾಸದಲ್ಲಿ ಈ ವಿದ್ಯಮಾನ ನಡೆದಿದೆ.

ಉದಯ್ ಕುಮಾರ್ ಅವರು ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಅರುಣಾ ದೇವಿ ಅವರ ಪತಿ. ಸಿಬಿಐ, ಉದಯ್ ಅವರನ್ನು ಶಿವಮೊಗ್ಗದಲ್ಲಿ ಬೇರೆ ಬೇರೆ ಕಚೇರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದಿದ್ದರು. ವಿವಿಧ ಬ್ಯಾಂಕುಗಳಲ್ಲಿ ಕುಟುಂಬಕ್ಕೆ ಸಂಬಂಧಪಟ್ಟ ಖಾತೆ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಬಳಿಕ ಉದಯ್ ಕುಮಾರ್ ಅವರನ್ನು ಅವರ ನಿವಾಸಕ್ಕೆ ವಾಪಸ್ ಕರೆತಂದು ಬಿಟ್ಟಿದ್ದಾರೆ. ಸಿಬಿಐ ತಂಡ ಬೆಂಗಳೂರಿಗೆ ವಾಪಸಾಗಿದೆ.

ಗಮನಾರ್ಹವೆಂದರೆ ಯಡಿಯೂರಪ್ಪ ಸೇರಿದಂತೆ ಪ್ರಕರಣದಲ್ಲಿ ಬೇರೆ ಯಾವುದೇ ಆರೋಪಿಯನ್ನು ಸಿಬಿಐ ಬಂಧಿಸಿಲ್ಲ. ಈ ಮಧ್ಯೆ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಅವರನ್ನು ಇಂದು ಸಂಜೆ ಅಥವಾ ನಾಳೆ ಗುರುವಾರ ಬಂಧನಕ್ಕೊಳಗಾಗುವ ಲಕ್ಷಣಗಳಿವೆ.

ಬಂಧನವಿಲ್ಲ; ವಿಚಾರಣೆ ಅಷ್ಟೇ: ತಮ್ಮ ಪತಿ ಉದಯ್ ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿಲ್ಲ. ಕೇವಲ ವಿಚಾರಣೆಗಾಗಿ ಅವರನ್ನು ತಮ್ಮ ಜತೆಗೆ ಕರೆದುಕೊಂಡು ಹೋಗಿದ್ದಾರೆ. ಸಿಬಿಐ ಅಧಿಕಾರಿಗಳು ಇದನ್ನು ತಮಗೆ ಸ್ಪಷ್ಟಪಡಿಸಿದ್ದಾರೆ ಎಂದು ಅರುಣಾದೇವಿ ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+