ಸಿಬಿಐನಿಂದ ಯಾವುದೇ ಕ್ಷಣ ಯಡಿಯೂರಪ್ಪ ಬಂಧನ?

ಬೆಂಗಳೂರು, ಮೇ 16: ಸುಪ್ರೀಂಕೋರ್ಟ್ ಆದೇಶದನ್ವಯ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿಸುವ ಸಾಧ್ಯತೆ ಹೆಚ್ಚಾಗಿದೆ. ಸದ್ಯಕ್ಕೆ ಯಡಿಯೂರಪ್ಪ ಅವರು ರೇಸ್ ಕೋರ್ಸ್ ರಸ್ತೆಯಲ್ಲಿದ್ದಾರೆ.

ಶೋಭಾ ಲಾಬಿ: ಎರಡು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಯಡಿಯೂರಪ್ಪ ಅವರ ಆಪ್ತರಾದ ಶೋಭಾ ಕರಂದ್ಲಾಜೆ ಅವರು ಯಡಿಯೂರಪ್ಪ ಬಂಧನವನ್ನು ತಪ್ಪಿಸಲು ದೊಡ್ಡ ಮಟ್ಟದಲ್ಲಿ ಭಾರಿ ಲಾಬಿ ನಡೆಸುತ್ತಿದ್ದಾರೆ ಎಂದು tv ವರದಿ ಮಾಡುತ್ತಿದೆ.

ಏಕಾಏಕಿ ಬಂಧನಕ್ಕೆ ಕಾರಣವೇನು?: ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಆರೋಪಿಗಳಿಗೆ ಸೇರಿದ ಮನೆಗಳು ಮತ್ತು ಕಚೇರಿಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಸಿಬಿಐ ತಂಡ ದಾಳಿ ನಡೆಸಿತ್ತು. ಏಕಕಾಲದಲ್ಲಿ ಶಿವಮೊಗ್ಗ, ಶಿಕಾರಿಪುರ ಮತ್ತು ಬಳ್ಳಾರಿಗಳಲ್ಲಿ ಸಿಬಿಐ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೂ ಸಿಬಿಐ ತಂಡಕ್ಕೆ ನೆರವು ನೀಡುತ್ತಿದ್ದಾರೆ.

ಆದರೆ ಇನ್ನೂ ಹಲವಾರು ದಾಖಲೆ, ಕಡತಗಳು ನಾಪತ್ತೆಯಾಗಿರುವುದು ಸಿಬಿಐ ಗಮನಕ್ಕೆ ಬಂದಿದೆ. ಹೀಗಾಗಿ ಹೆಚ್ಚಿನ ಮಾಹಿತಿಗಾಗಿ ಪ್ರಕರಣದ ಆರೋಪಿ ನಂ. 1 ಯಡಿಯೂರಪ್ಪ ಅವರನ್ನು ಸಿಬಿಐ ತನ್ನ ವಶಕ್ಕೆ ತೆಗೆದುಕೊಳ್ಳುವ ಸಾಧ್ಯೆತಗಳು ಹೆಚ್ಚಾಗಿವೆ.

ಇದೇ ವೇಳೆ, ಯಡಿಯೂರಪ್ಪ ಅವರ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಮತ್ತು ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಗಳ ಸುತ್ತ ಸ್ಥಳೀಯ ಪೊಲೀಸರು ಭಾರಿ ಭದ್ರೆತೆ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+