ಐಎಎಸ್ ಜೈರಾಜ್ ನಿವೃತ್ತಿ; 'ಜೈತ್ರಯಾತ್ರೆ' ಬಿಡುಗಡೆ

ಐಎಎಸ್ ಜೈರಾಜ್ (ಜನನ 25-05-1952) ತಮ್ಮ ಅಪಾರ, ಅಮೂಲ್ಯ ಆಡಳಿತಾನುಭವದಲ್ಲಿ ಕಂಡ ಅಪರೂಪದ ಪ್ರಸಂಗಗಳನ್ನು (ಜುಲೈ 79 ರಲ್ಲಿ ಸೇವೆ ಆರಂಭ) ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಅಂಕಿತ ಪ್ರಕಾಶನ ಈ ಪುಸ್ತಕವನ್ನು ಹೊರತಂದಿದೆ.
ಈ ಕಾರ್ಯಕ್ರಮವು ರಾಜಧಾನಿಯ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ 20-5-2012ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸುಪ್ರೀಂಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ ಎನ್ ವೆಂಕಟಾಚಲಯ್ಯ ಅವರು ಜೈರಾಜ್ ಅವರ 'ಜೈತ್ರಯಾತ್ರೆ -ಆಡಳಿತದ ನೆನಪುಗಳು' ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಮತ್ತು ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನೆಲ್ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳು.












Click it and Unblock the Notifications