• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಂದಿನ ಹೋರಾಟ ಡಿಕೆಶಿ ಗಣಿಗಾರಿಕೆ ವಿರುದ್ಧ

By Srinath
|
ಹುಬ್ಬಳ್ಳಿ, ಮೇ 19: ಅಮೆರಿಕ ಪ್ರವಾಸ ಮುಗಿಸಿ ವಾಪಸಾಗಿರುವ ಸಮಾಜ ಪರಿವರ್ತನೆ ಸಮುದಾಯ ಸಂಸ್ಥೆ ಅಧ್ಯಕ್ಷ ಎಸ್‌ಆರ್‌ ಹಿರೇಮಠ್ ಅವರು ಯಡಿಯೂರಪ್ಪ ವಿರುದ್ಧದ ಸಿಬಿಐ ತನಿಖೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ತಮ್ಮ ನಡೆನುಡಿಗಳನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ನೇರವಾಗಿ ಸುಪ್ರೀಂಕೋರ್ಟ್ ಅಂಗಳದಲ್ಲೇ ಸಮರ ಸಾರಲು ಬಯಸುವ ಎಸ್‌ಆರ್ ಹಿರೇಮಠ್ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಅಕ್ರಮ ಗಣಿಗಾರಿಕೆ ಪಿತಾಮಹ ಎಂದು ಬಣ್ಣಿಸಿದ್ದು, ಮುಂದಿನ ವಾರ ಅವರ ವಿರುದ್ಧದ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ. ಡಿಕೆಶಿ ಅಕ್ರಮ ಅದಿರು ಸಾಗಣೆ ಮಾಡಿದ ದಾಖಲೆಗಳು ಲಭ್ಯವಾಗಿದ್ದು ಸುಪ್ರೀಂಕೋರ್ಟ್‌ ಹಾಗೂ ಸಿಇಸಿಗೆ ಸಲ್ಲಿಸುವುದಾಗಿ ಹಿರೇಮಠ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಹಾಗೂ ಡಿನೋಟಿಫಿಕೇಶನ್‌ ಮಾಡಿದ ಬಗ್ಗೆ ನಮ್ಮ ಹೋರಾಟ ವ್ಯಕ್ತಿ ಆಧಾರಿತವಲ್ಲ ಬದಲಾಗಿ ವಿಷಯಾಧಾರಿತ. ಆ ಪಕ್ಷ, ಈ ಪಕ್ಷ; ಯಡಿಯೂರಪ್ಪ, ಕುಮಾರಸ್ವಾಮಿ ಇಲ್ಲವೆ ಮತ್ಯಾರೋ ಎಂದು ನೋಡುವುದಿಲ್ಲ. ಯಡಿಯೂರಪ್ಪ ವಿರುದ್ಧ ತನಿಖೆ ಆರಂಭವಾಗಿದೆ. ಹಾಗೆಯೇ, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ. ಕೃಷ್ಣ, ಧರಂಸಿಂಗ್‌, ಎಚ್‌.ಡಿ.ಕುಮಾರಸ್ವಾಮಿ ಇನ್ನಿತರರ ವಿರುದ್ಧವೂ ಕಾನೂನು ಹೋರಾಟ ಮುಂದುವರಿಯಲಿದೆ ಎಂದರು.

ರಾಜ್ಯದಲ್ಲಿ 2000ದಿಂದ 2010ರವರೆಗೆ ನಡೆದ ಅಕ್ರಮ ಗಣಿಗಾರಿಕೆ ಕುರಿತು ಸಮಗ್ರ ತನಿಖೆ ನಡೆಯಬೇಕೆಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. 1999-2006ರವರೆಗೆ ಅಕ್ರಮ ಅದಿರು ಸಾಗಣೆ ಹೆಚ್ಚಾಗಿದೆ. ಈ ಅವಧಿಯಲ್ಲಿ ಮುಖ್ಯಮಂತ್ರಿ ಆದವರ ವಿರುದ್ಧವೂ ವಿಚಾರಣೆ ನಡೆಯಲಿದೆ ಎಂದರು.

ಕಾಂಗ್ರೆಸ್ ಮುಖಂಡ ಡಿಕೆಶಿಯವರು ಅಕ್ರಮ ಗಣಿಯಿಂದ ಕೋಟ್ಯಂತರ ರೂಪಾಯಿ ಲಾಭ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ರಾಚೇನಹಳ್ಳಿ, ನಾಗವಾರ ಡಿನೋಟಿಫಿಕೇಶನ್‌ನಲ್ಲಿ ಡಿಕೆಶಿ ಅಕ್ರಮ ಎಸಗಿದ್ದು, ಈ ಬಗ್ಗೆ ಸಂಪೂರ್ಣ ದಾಖಲೆ ತಮ್ಮ ಬಳಿ ಇದೆ ಎಂದಿದ್ದಾರೆ.

ದೆಹಲಿಯಲ್ಲಿ ಡಿಕೆಶಿ ಪ್ರತಿಕ್ರಿಯೆ: ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವವರು (ಹಿರೇಮಠ) ಜೆಡಿಎಸ್ ಪಕ್ಷದ ಪ್ರತಿನಿಧಿ ಎಂಬುದು ಗೊತ್ತಿದೆ. ಅವರು ನೀಡಿರುವ ದೂರಿನಂತೆ ನಾನು ಯಾವುದೇ ತನಿಖೆಗೂ ಸಿದ್ಧವಾಗಿದ್ದೇನೆ. ನಾನು ಯಾವುದೇ ಅಕ್ರಮ ಎಸಗಿಲ್ಲ ಎಂದು ಪ್ರಸ್ತುತ ದೆಹಲಿಯಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Samaja Parivarthana Samudaya, an NGO, head advocate SR Hiremath is all set to wage another round of war against corruption. This time it will be against DK Shivkumar, a well known congress leader declared Hiremath in Hubli Yesterday (May 18).

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more