ವೆಬ್‌ಸೈಟ್‌ ಮೂಲಕ ವೇಶ್ಯಾ ದಂಧೆ, ಮೂವರು ಸೆರೆ

Prostitution Racket busted Koramangala
ಬೆಂಗಳೂರು, ಮೇ 21: ವೆಬ್‌ಸೈಟ್‌ನಲ್ಲಿ ಜಾಹೀರಾತು ನೀಡಿ ಹೈಟೆಕ್‌ ವೈಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಮೂವರನ್ನು ಭಾನುವಾರ(ಮೇ.20) ರಾತ್ರಿ ಬಂಧಿಸಿದ್ದಾರೆ.

ಯುವತಿಯೊಬ್ಬಳ ಹೆಸರಿನಲ್ಲಿ ಜಾಹೀರಾತು ನೀಡಿ ಮೊಬೈಲ್‌ಫೋನ್ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಪಾದನೆಯ ಮೇಲೆ ಬಂಗಾಳ ಮೂಲದ ಯುವತಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ಪ್ರಕರಣ ದಾಖಲಿಸಿದ್ದಾರೆ.

ಬಂಧಿತರನ್ನು ಹಾಸನ ಮೂಲದ ಜಗದೀಶ್ (24), ಬಸವನಗುಡಿಯ ರಘು ಪ್ರಕಾಶ್ (25) ಹಾಗೂ ಪಶ್ಚಿಮ ಬಂಗಾಳ ಮೂಲದ ಕಾಜೋಲ್ ಪಾಲ್ (24) ಎಂದು ಗುರುತಿಸಲಾಗಿದೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲದ 8ನೇ ಬ್ಲಾಕ್‌ನಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಇಬ್ಬರು ಪರಾರಿಯಾಗಿದ್ದಾರೆ.

ಬಂಧಿತರಿಂದ 25,000 ರೂ.ನಗದು, ಮೂರು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಕ್ಕಿ ಮತ್ತು ರಾಹುಲ್ ಎಂಬವರು ತಲೆ ಮರೆಸಿಕೊಂಡಿದ್ದು, ಹುಡುಕಾಟ ಜಾರಿಯಲ್ಲಿದೆ ಎಂದು ಆಡುಗೋಡಿ ಪೊಲೀಸ್ ಠಾಣಾಧಿಕಾರಿ ಹೇಳಿದ್ದಾರೆ. [ವಂಚಕರು ಹೀಗೂ ಇರ್ತಾರೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+