ಯಡಿಯೂರಪ್ಪ ಬಿಜೆಪಿಗೆ ಗೇಲ್ ಇದ್ದಂತೆ!

ಎಲ್ಲಿಯ ಸಿಕ್ಸರ್ ರಾಜಾ, ಎಲ್ಲಿಯ ಯಡಿಯೂರಪ್ಪಾ? ಅಕಸ್ಮಾತ್ ಈ ಹೋಲಿಕೆಯ ವಿಷಯ ಗೇಲ್ ಕಿವಿಗೆ ಬಿದ್ದರೆ ಅವರ ಪ್ರತಿಕ್ರಿಯೆ ಏನಿರಬಹದು!?
ಆದರೂ ಇಂತಹ ಹೋಲಿಕೆ ನೀಡಿ ಕೃತಾರ್ಥರಾಗಿರುವವರು ಯಡಿಯೂರಪ್ಪನವರ ಕಟ್ಟಾ ಬೆಂಬಲಿಗ ಉಮೇಶ್ ವಿಶ್ವನಾಥ್ ಕತ್ತಿ. ಇವರು ಬೆಳಗಾವಿಯ ಹುಕ್ಕೇರಿ ವೀಧಾನಸಭಾ ಕ್ಷೇತ್ರದ ಹಾಲಿ ಶಾಸಕ. ಯಾವುದೇ ಪಕ್ಷವನ್ನು ಪ್ರತಿನಿಧಿಸಿದರೂ ಚುನಾವಣೆಗಳಲ್ಲಿ ಸ್ವತಃ ಗೆಲುವಿನ ನಾಗಾಲೋಟದಲ್ಲಿರುವ ಜನಪ್ರತಿನಿಧಿ. ಇವರು ಯಡಿಯೂರಪ್ಪ ಪಾಳಯದಲ್ಲಿ ಚಟುವಟಿಕೆಗಳ ಕುರಿತು Deccan Chronicle ಆಂಗ್ಲ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಯಡಿಯೂರಪ್ಪ ಅವರನ್ನು ಗೇಲ್ ಗೆ ಹೋಲಿಸಿದ್ದಾರೆ.
ಸಂದರ್ಶನದ ವೇಳೆ, ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲ ಎಂದಿರುವ ಉಮೇಶ್ ಕತ್ತಿ, ಯಡಿಯೂರಪ್ಪನವರನ್ನು ಹಾಡಿಹೊಗಳಿದ್ದಾರೆ. 'ಮುಖ್ಯಮಂತ್ರಿ ಯಡಿಯೂರಪ್ಪ' ಅವರ ಸಾಧನೆಗಳನ್ನು ಕೊಂಡಾಡಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ತಪ್ಪಾಗಿ ಅವರನ್ನು ಸಿಲುಕಿಸಲಾಗಿದೆ. ಇದು ಕಾಂಗ್ರೆಸ್ ಮತ್ತು ಕೆಲ ಬಿಜೆಪಿ ನಾಯಕರ ಜಂಟಿ ಕಾರ್ಯಾಚರಣೆಯ ಫಲ. ಅದಕ್ಕಿಂತ ಭಾರಿ ತಪ್ಪು ಮಾಡಿದ ನಾಯಕರು ಸ್ವತಂತ್ರವಾಗಿ ಓಡಾಡಿಕೊಂಡಿರುವಾಗ ನಮ್ಮ ನಾಯಕ ಯಡಿಯೂರಪ್ಪಗೆ ಏಕೆ ಈ ಶಿಕ್ಷೆ ಎಂದೂ ಪ್ರಶ್ನಿಸಿದ್ದಾರೆ.
ಕ್ರಿಕೆಟ್ ಭಾಷೆಯಲ್ಲಿ ಹೇಳುವುದಾದರೆ ಕ್ರಿಸ್ ಗೇಲ್ ಅವರಂತೆ ಬಿಜೆಪಿಗೆ ಯಡಿಯೂರಪ್ಪನವರೇ ಮ್ಯಾಚ್ ವಿನ್ನರ್ ಎಂದು ಉಮೇಶ್ ಕತ್ತಿ ಘಂಟಾಘೋಷವಾಗಿ ಹೇಳಿದ್ದಾರೆ.
ಶೋಭಾ ಅಂತಹವರಲ್ಲ: ಪಕ್ಷದಲ್ಲಿನ ಎಲ್ಲ ಆಗುಹೋಗುಗಗಳಿಗೂ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇತುವಾಗಿದ್ದಾರೆ. ಯಡಿಯೂರಪ್ಪನವರಿಗೆ ಹತ್ತಿರವಾಗಿರುವ ಶೋಭಾ ಪಕ್ಷದೊಳಗಿನ ಬಿಕ್ಕಟ್ಟಿಗೆ ಕಾರಣವಾಗುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಉಮೇಶ್ ಕತ್ತಿ, ಆ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಬದಲಿಗೆ ಪಕ್ಷದಲ್ಲಿನ ಕೆಲ ಹಿರಿ ನಾಯಕರೇ ಇಂದಿನ ಬಿಕ್ಕಟ್ಟಿನ ಸೃಷ್ಟಿಕರ್ತರು. ಪಕ್ಷದ ಹೈಕಮಾಂಡ್ ಸಕಾಲದಲ್ಲಿ ಇದನ್ನು ಇತ್ಯರ್ಥಪಡಿಸಿದ್ದರೆ ಇಂತಹ ಪರಿಸ್ಥಿತಿಯೇ ಉದ್ಭವಿಸುತ್ತಿರಲಿಲ್ಲ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications