ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಡಾ.ಅಶ್ವಿನ್ ನಾಮಪತ್ರ

ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಜ್ಯಾಧ್ಯಕ್ಷೆ ಕೆ. ರಾಮಲಕ್ಷ್ಮೀ, ರಾಜ್ಯ ಕಾರ್ಯದರ್ಶಿ ಶಾಂತಲಾ ದಾಮ್ಲೆ, ಬೆಂಗಳೂರು ನಗರಾಧ್ಯಕ್ಷೆ ಡಾ. ಮೀನಾಕ್ಷಿ ಭರತ್, ನಗರ ಕಾರ್ಯದರ್ಶಿ ಯೋಗಯ್ಯ ಮತ್ತು ಪಕ್ಷದ ಇತರ ಕಾರ್ಯಕರ್ತರು, ಬೆಂಬಲಿಗರು ಹಾಜರಿದ್ದರು.
ಖಗೋಳ ಹಾಗೂ ವಾಯುಮಂಡಲ ವಿಜ್ಞಾನಿಯಾಗಿ ತರಬೇತಿ ಪಡೆದಿರುವ ಡಾ. ಅಶ್ವಿನ್ ಮಹೇಶ್ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಡಾ. ಮಹೇಶ್ ತಮ್ಮ ವೃತ್ತಿ ಜೀವನವನ್ನು ನಕ್ಷತ್ರಗಳ ರಚನೆ, ಜಾಗತಿಕ ಹವಾಮಾನ ಬದಲಾವಣೆ, ನಗರೀಕರಣ ಹಾಗೂ ಸಾರ್ವಜನಿಕ ಸಾರಿಗೆ ಮುಂತಾದ ವಿಷಯಗಳ ಕುರಿತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ ಅವರು ಸಂಶೋಧನಕಾರರಾಗಿ Centre of Excellence in Urban Governance, IIMB, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ABIDE ಸದಸ್ಯರಾಗಿ ಡಾ. ಅಶ್ವಿನ್ ಮಹೇಶ್ ಅವರು ಬೆಂಗಳೂರಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಪ್ರಮುಖವಾಗಿ ನಗರ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಇವರು ಪರಿಚಯಿಸಿದ ಬಿಗ್10/ಬಿಗ್‌ಸರ್ಕಲ್ ಬಸ್ಸುಗಳು ಜನಪ್ರಿಯವಾಗಿವೆ. ಬೆಂಗಳೂರು ಸಂಚಾರ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಡೆಸಲು ದೇಶದಲ್ಲೇ ಪ್ರಥಮ ಬಾರಿಗೆ ಉತ್ಕೃಷ್ಟ ಸಂಚಾರ ನಿರ್ವಹಣಾ ಕೊಠಡಿಯನ್ನು ಸ್ಥಾಪಿಸುವಲ್ಲಿ ನೆರವಾಗಿದ್ದಾರೆ ಮತ್ತು ತಮ್ಮ ಮ್ಯಾಪಯುನಿಟಿ ಕಂಪನಿಯಿಂದ ಮಾಹಿತಿ ತಂತ್ರಜ್ಞಾನದ ನೆರವನ್ನು ನೀಡಿದ್ದಾರೆ. ಇವರ ಸಾಮಾಜಿಕ ಕೊಡುಗೆಯನ್ನು ಗುರುತಿಸಿ 2009ರಲ್ಲಿ ಸಾಮಾಜಿಕ ಉದ್ಯಮಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಶೋಕಾ ಫೇಲೊ ಗೌರವ ದೊರೆತಿದೆ.
ಡಾ. ಅಶ್ವಿನ್ ಅವರು ಭ್ರಷ್ಟಾಚಾರದ ವಿರುದ್ಧ ಭಾರತ (India Against Corruption)ದಲ್ಲಿ ಕರ್ನಾಟಕದ ಧ್ವನಿಯಾಗಿ ಹೋರಾಟ ಮಾಡಿದ್ದಾರೆ ಮತ್ತು ಕರ್ನಾಟಕದಲ್ಲಿ "ಭ್ರಷ್ಟಾಚಾರ ಸಾಕು" ಚಳವಳಿಯನ್ನು ಪ್ರಾರಂಭಿಸಿದವರಲ್ಲಿ ಒಬ್ಬರಾಗಿದ್ದಾರೆ. ಬಡ ಮಕ್ಕಳಿಗೆ ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಯೋಜನೆಗಳಿಗೆ ಸಹಕಾರ ನೀಡುತ್ತಿದ್ದಾರೆ.
ಅಶ್ವಿನ್ ಮಹೇಶ್ ಅವರನ್ನು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನದಾಸ್ ಪೈ, ಬಯೋಕಾನ್‌ನ ಕಿರಣ್ ಮಜುಮದಾರ್ ಷಾ, "ಲೀಡ್ ಇಂಡಿಯಾ" ವಿಜೇತ ಆರ್.ಕೆ.ಮಿಶ್ರಾ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಮ್.ಎನ್. ವೆಂಕಟಾಚಲಯ್ಯ, ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಇನ್ನೂ ಹಲವಾರು ಗಣ್ಯರು ಬೆಂಬಲಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications