ಅಲಹಾಬಾದ್‌ನಲ್ಲಿ ಬಾಂಬ್ ಸ್ಫೋಟ : 6 ಜನರ ಸಾವು

Bomb blast in Allahabad : Several dead
ಅಲಹಾಬಾದ್, ಮೇ. 23 : ಉತ್ತರ ಪ್ರದೇಶದ ಅಲಹಾಬಾದ್‌ನ ಕರೇಲಿ ಪ್ರದೇಶದಲ್ಲಿ ಬುಧವಾರ ಸಂಜೆ 4 ಗಂಟೆಗೆ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ನಾಲ್ಕು ಮಕ್ಕಳು ಸೇರಿದಂತೆ ಆರು ಹತರಾಗಿದ್ದು 15ರಿಂದ 20 ಜನ ಗಾಯಗೊಂಡಿದ್ದಾರೆ. ಅವರಲ್ಲಿ 6 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.

ಕೊಳಚೆ ಪ್ರದೇಶದಲ್ಲಿ ಕಸದ ತೊಟ್ಟಿಯಲ್ಲಿ ಇಡಲಾಗಿದ್ದ ಬಾಂಬ್ ಸ್ಫೋಟ ಸಂಭವಿಸಿದ್ದು, ಹತ್ತಿರದಲ್ಲಿ ಆಟವಾಡುತ್ತಿದ್ದ ಕಸ ಆಯುವ ಮಕ್ಕಳು ಬಲಿಯಾಗಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಸದ ತೊಟ್ಟಿಯ ಬಳಿ ಭೀಕರ ಸ್ಫೋಟ ಸಂಭವಿಸಿತು. ಈ ಸ್ಫೋಟದ ಸದ್ದು 500 ಮೀಟರ್ ವರೆಗೆ ಕೇಳಿಬಂದಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತ್ತು, ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಸುಳಿವಿಗಾಗಿ ಹುಡುಕಲಾಗುತ್ತಿದೆ. ಪೊಲೀಸರು ತನಿಖೆ ಕೈಗೊಂಡಿದ್ದು, ಸ್ಫೋಟಗೊಂಡ ಬಾಂಬ್ ಎಂಥದ್ದೆಂದು ಅಧ್ಯಯನ ನಡೆಸುತ್ತಿದ್ದಾರೆ.

ಈ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಅಲಹಾಬಾದ್ ಮತ್ತು ಉತ್ತರ ಪ್ರದೇಶದಾದ್ಯಂತ ಪೊಲೀಸರಿಗೆ ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+