ದೆಹಲಿ ಪಂಜಾಬ್ ಬ್ಯಾಂಕ್‌ನಲ್ಲಿ ಭಾರೀ ಅಗ್ನಿ ಆಕಸ್ಮಿಕ
ನವದೆಹಲಿ,
ಮೇ. 23 : ದೆಹಲಿಯ ಹೃದಯಭಾಗದಲ್ಲಿರುವ ಪಾರ್ಲಿಮೆಂಟ್ ರಸ್ತೆಯಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಬುಧವಾರ ಸಂಜೆ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಕಚೇರಿಯಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. id="toptextpromo">ಕಚೇರಿ
ಕೆಲಸ ಮುಗಿಯುವ ಮೊದಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ, ಅನೇಕ ನೌಕರರು ಕಚೇರಿಯ ಒಳಗಡೆ ಸಿಲುಕಿಕೊಂಡಿರಬಹುದೆಂದು ಶಂಕಿಸಲಾಗಿದೆ. ಜನರನ್ನು ರಕ್ಷಿಸುವ ಕಾರ್ಯ ಸಾಗಿದ್ದು, ಅಗ್ನಿಯನ್ನು ನಂದಿಸಲು 25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. id='are-slot-1' class='oiad oi-axt oiadv'> id='top-searched-articles'>ಪಟೇಲ್
ಚೌಕ್ ಮೆಟ್ರೋ ಸ್ಟೇಷನ್ ಬಳಿ ಇರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಈ ಅಗ್ನಿ ಅನಾಹುತ ಸಂಭವಿಸಿದೆ. ಇದೇ ಕಟ್ಟಡದಲ್ಲಿ ಯುಕೋ ಬ್ಯಾಂಕ್ ಕೂಡ ಇದೆ. ಅಗ್ನಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದೀಗ ಬಂದಿರುವ ವರದಿಯ ಪ್ರಕಾರ, ಎಲ್ಲ ಜನರನ್ನು ರಕ್ಷಿಸಲಾಗಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ.











Click it and Unblock the Notifications