ಯಡಿಯೂರಪ್ಪ ಮುಂದಿನ ನಡೆ ಬಗ್ಗೆ ಸುಳಿವು

ಇದೇ ಸಂದರ್ಭದಲ್ಲಿ ಬಿಎಸ್ ವೈ ಮುಂದಿನ ನಡೆಯನ್ನು ಕರ್ನಾಟಕದ ಜನತೆ ನಿರ್ಧರಿಸುತ್ತದೆ ಎಂದು ಘೋಷಿಸಿದ್ದಾರೆ. ಮಲ್ಲೇಶ್ವರಂ ಕಚೇರಿಯಲ್ಲಿ ಜನ ಸಂಪರ್ಕ ಯಾಕೋ ಡಲ್ ಹೊಡೆಯಲು ಶುರು ಮಾಡಿದ ತಕ್ಷಣವೇ ಎಚ್ಚೆತ್ತುಕೊಂಡ ಯಡಿಯೂರಪ್ಪ ತಮ್ಮ ಮುಂದಿನ ಪ್ರವಾಸ ಬಗ್ಗೆ ಮಾಹಿತಿ ಹೊರ ಹಾಕಿದ್ದಾರೆ.
ಜೂನ್ ಮೊದಲ ವಾರದಿಂದ ಮತ್ತೊಮ್ಮೆ ಕರ್ನಾಟಕ ಪ್ರವಾಸ ಮಾಡುತ್ತೇನೆ. ಆದರೆ, ಈ ಬಾರಿ ಜನರ ಅಭಿಪ್ರಾಯ ಸಂಗ್ರಹಿಸಿ ನನ್ನ ಮುಂದಿನ ರಾಜಕೀಯ ನಡೆ ಬಗ್ಗೆ ಸ್ಪಷ್ಟವಾಗಿ ನಿರ್ಧಾರ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮೇ.30,31ರಂದು ತಮ್ಮ ಮೊಮ್ಮಗಳ ಮದುವೆ ಕಾರ್ಯಕ್ರಮ ಪೂರೈಸಿಕೊಂಡು, ರಾಜ್ಯ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ನನ್ನ ತಪ್ಪಿಗೆ ಪಕ್ಷವನ್ನು ಹೊಣೆ ಮಾಡುವುದು ಸರಿಯಲ್ಲ. ಜನತಾ ನ್ಯಾಯಾಲಯದ ಮುಂದೆ ಯಾರೂ ದೊಡ್ಡವರಲ್ಲ. ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ನಾನು ಅದನ್ನು ಜನತೆ ನೀಡಿದ್ದೇನೆ ಅಷ್ಟೇ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಜನಾಭಿಪ್ರಾಯ ಸಂಗ್ರಹಿಸಿ ಹೊಸ ಪಕ್ಷಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆ ಮಾಡಿಕೊಳ್ಳಲು ಯಡಿಯೂರಪ್ಪ ಅವರು ಕರ್ನಾಟಕ ಪ್ರವಾಸದ ನೆಪವೊಡ್ಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಯಾವುದಕ್ಕೂ ಕಾದು ನೋಡೋಣ...












Click it and Unblock the Notifications