ಮೇ.30ಕ್ಕೆ ಗಾಲಿ ಜನಾರ್ದನ ರೆಡ್ಡಿ ಭವಿಷ್ಯ ನಿರ್ಧಾರ

Gali Janardhana Reddy
ಬೆಂಗಳೂರು, ಮೇ.24: ಎಎಂಸಿ(ಅಸೋಸಿಯೇಟೆಡ್ ಮೈನಿಂಗ್ ಕಂಪನಿ) ಹಾಗೂ ಡೆಕ್ಕನ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಭವಿಷ್ಯ ಮೇ.30ರಂದು ನಿರ್ಧಾರವಾಗಲಿದೆ.

ಎಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ರೆಡ್ಡಿ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಗಾಲಿ ರೆಡ್ಡಿ ಅವರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಸಿಬಿಐ ವಿಶೇಷ ನ್ಯಾಯಾಲಯ ಎರಡೂ ಕಡೆ ವಾದ ಪ್ರತಿವಾದವನ್ನು ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ಓಬಳಾಪುರಂ ಗಣಿ ಸಂಸ್ಥೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಾಡಿ ವಾರೆಂಟ್ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿತ್ತು.

ಓಎಂಸಿ ಪ್ರಕರಣದಲ್ಲಿ ಗಾಲಿ ರೆಡ್ಡಿ ಪಡೆದಿದ್ದ ಜಾಮೀನನ್ನು ಜೂ.5ರವರೆಗೂ ತಡೆ ಹಿಡಿದು ನಾಂಪಲ್ಲಿ ಸಿಬಿಐ ಕೋರ್ಟ್ ಆದೇಶ ನೀಡಿದೆ. ಮೇ 30 ರಂದು ಬೆಂಗಳೂರು ನ್ಯಾಯಾಲಯದಲ್ಲಿ ಜಾಮೀನು ಪಡೆದರೂ ಜೂ.5 ರಂದು ಹೈದರಾಬಾದಿನ ಕೋರ್ಟ್ ಆದೇಶಕ್ಕಾಗಿ ಗಾಲಿ ರೆಡ್ಡಿ ಕಾಯಬೇಕಾಗುತ್ತದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದರೂ ಚಂಚಲಗುಡ ಜೈಲು ಬಾಗಿಲು ರೆಡ್ಡಿಗಾಗಿ ಸದಾ ತೆರೆದಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+