ನೀವು ಭ್ರಷ್ಟಾಚಾರ ವಿರೋಧಿಯಾಗಿದ್ದರೆ ಮಲ್ಲೇಶ್ವರಕ್ಕೆ ಬನ್ನಿ

ಭ್ರಷ್ಟಾಚಾರದ ವಿರುದ್ಧ ಯುದ್ಧ ಸಾರಿರುವ, ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆಯವರು ನಾಗರಿಕರನ್ನು ಖುದ್ದಾಗಿ ಭೇಟಿ ಮಾಡಿ, ಜೂನ್ 10ರಂದು ನಡೆಯಲಿರುವ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ 'ಭ್ರಷ್ಟಾಚಾರ ವಿರೋಧಿ' ಅಭ್ಯರ್ಥಿಗೆ ಮತ ಹಾಕಬೇಕೆಂದು ಕರೆ ನೀಡಲಿದ್ದಾರೆ.
'ನ್ಯಾಯದ ಹಾದಿಯಲ್ಲಿ ನಡೆಯಿರಿ' ಎಂಬ ಅಭಿಯಾನವನ್ನು ಸಂತೋಷ್ ಹೆಗ್ಡೆಯವರು ಬೆಂಗಳೂರು ನಗರದ ಉದ್ದಗಲಕ್ಕೂ ಕೊಂಡೊಯ್ಯುತ್ತಿದ್ದಾರೆ. ಮೊದಲಿಗೆ ಮಲ್ಲೇಶ್ವರ 17ನೇ ಕ್ರಾಸ್ನಲ್ಲಿರುವ 'ಭೂಮಿಕಾ'ದಲ್ಲಿ ಸಂಜೆ 5.30ಕ್ಕೆ ಮತದಾರರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದರ ನೇತೃತ್ವವನ್ನು ಪರಸರ ಹೋರಾಟಗಾರ್ತಿ ಡಾ. ಮೀನಾಕ್ಷಿ ಭರತ್ ಅವರು ವಹಿಸುತ್ತಿದ್ದಾರೆ.
ಇದರ ನಂತರ ಸಂಜೆ 7 ಗಂಟೆ ಹೊತ್ತಿಗೆ ರಾಜಾಜಿನಗರದ ಪಶ್ಚಿಮ ಕಾರ್ಡ್ ರಸ್ತೆಯ ಎರಡನೇ ಹಂತದಲ್ಲಿರುವ ಡಾ. ಅಂಬೇಡ್ಕರ್ ಕಾಲೇಜ್ ಆಫ್ ಎಜ್ಯುಕೇಷನ್ನಲ್ಲಿ ನಾಗರಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಭ್ರಷ್ಟಾಚಾರದ ವಿರುದ್ಧ ತಮ್ಮ ಅಭಿಯಾನವನ್ನು ಮನೆಮನೆಗೂ ಕೊಂಡೊಯ್ಯಲಿದ್ದಾರೆ. ನೀವು ಭ್ರಷ್ಟಾಚಾರದ ಕಟ್ಟಾ ವಿರೋಧಿಯಾಗಿದ್ದರೆ ಖಂಡಿತ ಬನ್ನಿ ಎಂದು ಆಯೋಜಕರು ನಾಗರಿಕರನ್ನು ಕಳಕಳಿಯಿಂದ ಕೇಳಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications