ಕೇರಳದಲ್ಲಿ ಗುಟ್ಕಾ,ಪಾನ್ ಮಸಾಲಕ್ಕೆ ನಿಷೇಧ

ಬಾಯಿ ಕ್ಯಾನ್ಸರ್ ಸೇರಿದಂತೆ ಹಲವು ರೋಗ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಶುಕ್ರವಾರ(ಮೇ.25)ದಿಂದ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ನಿಷೇಧ ಹೇರಲಾಗಿದೆ.
2011ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಕಾಯ್ದೆಯಡಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.
ಮಧ್ಯಪ್ರದೇಶದ ನಂತರ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ನಿಷೇಧ ಹೇರಿರುವ ಎರಡನೆ ರಾಜ್ಯ ಕೇರಳವಾಗಿದೆ.
ಪ್ಲಾಸ್ಟಿಕ್ ಪೊಟ್ಟಣಗಳಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಗಳಂಥ ತಂಬಾಕು ಉತ್ಪನ್ನಗಳ ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿತ್ತು.
ದೇಶದಲ್ಲಿ ಶೇಕಡ 90 ರಷ್ಟು ಬಾಯಿಯ ಕ್ಯಾನ್ಸರ್ ಪ್ರಕರಣಗಳು ತಂಬಾಕು ಜಗಿಯುವುದರಿಂದ ಕಾಣಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ಮಾಡಿದ ವರದಿ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ.












Click it and Unblock the Notifications