ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಗುಟ್ಕಾ,ಪಾನ್ ಮಸಾಲಕ್ಕೆ ನಿಷೇಧ

By Mahesh
|
Google Oneindia Kannada News

Kerala Bans Gutka, Pan Masala
ತಿರುವನಂತಪುರ, ಮೇ 26: ತಂಬಾಕು ಮತ್ತು ನಿಕೋಟಿನ್‌ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಉತ್ಪನ್ನಗಳ ಉತ್ಪಾದನೆ, ದಾಸ್ತಾನು, ವಿತರಣೆ ಮತ್ತು ಮಾರಾಟದ ಮೇಲೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಸಂಪೂರ್ಣ ನಿಷೇಧ ಹೇರಿದೆ.

ಬಾಯಿ ಕ್ಯಾನ್ಸರ್‌ ಸೇರಿದಂತೆ ಹಲವು ರೋಗ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಶುಕ್ರವಾರ(ಮೇ.25)ದಿಂದ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ನಿಷೇಧ ಹೇರಲಾಗಿದೆ.

2011ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಕಾಯ್ದೆಯಡಿ ತಂಬಾಕು ಮತ್ತು ನಿಕೋಟಿನ್‌ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.

ಮಧ್ಯಪ್ರದೇಶದ ನಂತರ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ನಿಷೇಧ ಹೇರಿರುವ ಎರಡನೆ ರಾಜ್ಯ ಕೇರಳವಾಗಿದೆ.

ಪ್ಲಾಸ್ಟಿಕ್ ಪೊಟ್ಟಣಗಳಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಗಳಂಥ ತಂಬಾಕು ಉತ್ಪನ್ನಗಳ ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿತ್ತು.

ದೇಶದಲ್ಲಿ ಶೇಕಡ 90 ರಷ್ಟು ಬಾಯಿಯ ಕ್ಯಾನ್ಸರ್ ಪ್ರಕರಣಗಳು ತಂಬಾಕು ಜಗಿಯುವುದರಿಂದ ಕಾಣಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ಮಾಡಿದ ವರದಿ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

English summary
Congress-led UDF government in Kerala on Friday(May.25) imposed a ban on the manufacture and sale of gutka and pan masala which contains tobacco.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X