ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭದ್ರಾ ಮೇಲ್ದಂಡೆ : ಯಡಿಯೂರಪ್ಪ ವಿರುದ್ಧ ಮರು ತನಿಖೆ

By Mahesh
|
Google Oneindia Kannada News

BS Yeddyurappa
ಬೆಂಗಳೂರು, ಮೇ.26: ಭದ್ರಾ ಮೇಲ್ದಂಡೆ ಯೋಜನೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಲೋಕಾಯುಕ್ತ ನ್ಯಾಯಾಲಯ ಶನಿವಾರ(ಮೇ.26) ತಿರಸ್ಕರಿಸಿದೆ.

ಲೋಕಾಯುಕ್ತ ಪೊಲೀಸರು ಫೆಬ್ರವರಿ ತಿಂಗಳಲ್ಲಿ ಸಲ್ಲಿಸಿದ್ದ ಬಿ ರಿಪೋರ್ಟ್ [B-report: When police have filed a B report you will have to file an objections and you will have to lead your evidence to get issue summons to the accused.-ವಕೀಲ ರಾಜೀವ್] ನಲ್ಲಿ ಯಡಿಯೂರಪ್ಪ ಅವರನ್ನು ನಿರ್ದೋಷಿ ಎಂದು ನಮೂದಿಸಲಾಗಿತ್ತು. ಇದಕ್ಕೆ ವೈಎಸ್ ವಿ ದತ್ತಾ ಪರ ವಕೀಲ ಪಿ.ಎನ್.ಹೆಗಡೆ ಅವರು ಆಕ್ಷೇಪ ವ್ಯಕ್ತಪಡಿಸಿ, ವರದಿ ಮರು ಪರಿಶೀಲನೆ ಮಾಡುವಂತೆ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದರು.

'ಭ್ರದ್ರಾ ಮೇಲ್ದಂಡೆ ಯೋಜನೆ ಅವ್ಯವಹಾರದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶಿಕ್ಷೆ ತಪ್ಪಿದ್ದಲ್ಲ. ಅಕ್ರಮ ಎಸೆಗಿದವರಿಗೆ ತಕ್ಕ ಪಾಠ ಕಲಿಸಬೇಕಿದೆ' ಎಂದು ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಹೇಳಿದ್ದಾರೆ.

ತನಿಖಾ ಪ್ರಗತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾ ಸುಧೀಂದ್ರರಾವ್ ಅವರು, 'ಲೋಕಾಯುಕ್ತ ಎಸ್ ಪಿ ಅವರು ಪೂರ್ವಾಗ್ರಹ ಪೀಡಿತರಾಗಿ ವರದಿ ನೀಡಿದ್ದಾರೆ. ಹಾಗಾಗಿ ಈ ವರದಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ.ಈ ವರದಿ ಆಧಾರಿಸಿ ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲು ಕಷ್ಟ. ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ಹೊಸದಾಗಿ ಬಿ ರಿಪೋರ್ಟ್ ಸಲ್ಲಿಸುವಂತೆ' ಆದೇಶಿಸಿದ್ದಾರೆ.

ಮತ್ತೆ ತನಿಖೆ ಶುರು: ಪ್ರಕರಣದ ಮುಂದಿನ ವಿಚಾರಣೆಯನ್ನು ಜೂ.18ಕ್ಕೆ ಮುಂದೂಡಲಾಗಿದೆ. ಲೋಕಾಯುಕ್ತ ಪೊಲೀಸರು ತಮ್ಮ ಹೊಸ ಬಿ ರಿಪೋರ್ಟ್ ಅನ್ನು 21 ದಿನದೊಳಗೆ ಕೋರ್ಟಿಗೆ ಸಲ್ಲಿಸಬೇಕಿದೆ. ತನಿಖಾಧಿಕಾರಿ ಡಿವೈಎಸ್ ಪಿ ಗಿರೀಶ್ ಎಸ್ ಅವರು ಆರ್ ಎನ್ ಎಸ್ ಇನ್ಫ್ರಾ ಸ್ಟಕ್ಚರ್ ಲಿ. ನೀಡಿರುವ ಗುತ್ತಿಗೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿ ನೀಡಿದ್ದರು.

ಭದ್ರಾ ಮೇಲ್ದಂಡೆ ಕಾಮಗಾರಿ ಎರಡನೇ ಹಂತದ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದ್ದು, ಯಡಿಯೂರಪ್ಪ ಅವರು ತಮಗೆ ಬೇಕಾದವರಿಗೆ ಗುತ್ತಿಗೆ ನೀಡಿ 16 ಕೋಟಿ ಲಂಚ ಪಡೆದಿದ್ದಾರೆ ಎಂದು ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಲೋಕಾಯುಕ್ತದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಆರ್ ಎನ್ ಎಸ್ ಇನ್ಫಾಸ್ಟಕ್ಚರ್ ಲಿ. ಜ್ಯೋತಿ ಲಿ. ಧವಳಗಿರಿ ಪ್ರಾಪರ್ಟೀಸ್, ಸಹ್ಯಾದ್ರಿ ಹೆಲ್ತ್ ಕೇರ್ ಮುರುಡೇಶ್ವರ ಎಂಟರ್ ಪ್ರೈಸರ್ ಸಂಸ್ಥೆಗಳ ಮೇಲೆ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

English summary
Lokayukta Court today (May.26) rejected the B report that gave a clean chit to former CM BS Yeddyurappa. Yeddyurappa and kins are accused of irregularities in awarding an second phase of upper bhadra irrigation project to a private firm
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X