• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಂಬೈಗೆ ಯಡಿಯೂರಪ್ಪ ಹೋಗಿದ್ದಾದರೂ ಏಕೆ?

By Prasad
|
Why did Yeddyurappa go to Mumbai?
ಬೆಂಗಳೂರು, ಮೇ. 26 : ಕರ್ನಾಟಕದ ಬಿಜೆಪಿ ನಾಯಕರು ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಕೆಂಡಾಮಂಡಲವಾಗಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂಬೈನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿಗೆ ಹೋಗಿದ್ದ ನಿಜವಾದ ಕಾರಣವಾದರೂ ಏನು? ಯಾವ್ದೇ ಕಾರಣಕ್ಕೂ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದೇ ಹೇಳುತ್ತಿದ್ದ ಯಡಿಯೂರಪ್ಪ, ಕೊನೆ ಕ್ಷಣದಲ್ಲಿ ಮೇ 25ರಂದು ಮುಂಬೈಗೆ ಪಯಣ ಬೆಳೆಸಿದ್ದಾದರೂ ಏತಕೆ?

ಇದಕ್ಕೆ ನಿಜವಾದ ಕಾರಣ ಬಿಜೆಪಿ ರಾಷ್ಟ್ರೀಯ ನಾಯಕರೊಡನೆ ಮತ್ತೆ ಗೆಳೆತನದ ತ್ಯಾಪೆ ಹಚ್ಚಲಿಕ್ಕೂ ಅಲ್ಲ, ತಾನಿನ್ನೂ ಬಿಜೆಪಿಯಲ್ಲಿದ್ದೇನೆ ಪಕ್ಷ ತೊರೆಯುವುದಿಲ್ಲ ಎಂಬ ಅಂಶವನ್ನು ಸಾರಲಿಕ್ಕೂ ಅಲ್ಲ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತನಾಗುವ ಭೀತಿಯಿಂದ ಬಚಾವಾಗಲು ಮುಂಬೈಗೆ ತೆರಳಿದ್ದು ಎಂದು ಬಿಜೆಪಿ ಆಂತರಿಕ ಮೂಲಗಳು ಪಿಸುಗುಡುತ್ತಿವೆ.

ಮೇ 25ರಂದು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅವರ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಸಿಬಿಐ ಅವರ ಜಾಮೀನು ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದೆ. ಯಡಿಯೂರಪ್ಪ ಅತ್ಯಂತ ಪ್ರಭಾವಿ ನಾಯಕನಾಗಿದ್ದು, ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕಾದರೆ ಅವರನ್ನು ವಶಕ್ಕೆ ತೆಗೆದುಕೊಂಡೇ ವಿಚಾರಣೆ ನಡೆಸಬೇಕು ಎಂಬ ವಾದವನ್ನು ಸಿಬಿಐ ವಕೀಲರು ಮುಂದಿಟ್ಟಿದ್ದಾರೆ.

ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ಸಿಬಿಐ ವಕೀಲರು ವಾದಿಸಿದ್ದಾರೆ. ಅಲ್ಲದೆ, ಯಡಿಯೂರಪ್ಪ ಅವರಿಗೆ ಜಾಮೀನು ನೀಡಿದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು. ವಿಚಾರಣೆಯನ್ನು ತೀವ್ರಗತಿಯಲ್ಲಿ ಮಾಡಿ ಜೂನ್ 3ರೊಳಗೆ ಸುಪ್ರೀ ಕೋರ್ಟಿಗೆ ವರದಿ ಸಲ್ಲಿಸಬೇಕಾಗಿರುವುದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಲಾಗಿದೆ.

ಈ ಎಲ್ಲ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಸಿಬಿಐ ವಿಚಾರಣೆಗಾಗಿ ತನ್ನ ವಶಕ್ಕೆ ತೆಗೆದುಕೊಳ್ಳುವ ಎಲ್ಲ ಲಕ್ಷಣಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ತಪ್ಪಿಸಲೆಂದೇ ಅವರು ಮುಂಬೈಗೆ ಹಾರಿದ್ದರೆಂದು ಮಾತುಗಳ ಕೇಳಿಬರುತ್ತಿವೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತೀನ್ ಗಡ್ಕರಿ ಅವರನ್ನು ಯಡಿಯೂರಪ್ಪನವರು ಗುಟ್ಟಾಗಿ ಭೇಟಿಯಾಗಿ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಅವರ ಭಾಗವಹಿಸುವಿಕೆಯಿಂದಾಗಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಸುಷ್ಮಾ ಸ್ವರಾಜ್ ಅವರು ಮುಂಬೈ ಸಭೆಯಲ್ಲಿ ಭಾಗವಹಿಸುವುದರಿಂದ ಹಿಂದೆ ಸರಿದಿದ್ದರೆಂದು ಇಲ್ಲಿ ಸ್ಮರಿಸಬಹುದು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Why did former chief minister of Karnataka BS Yeddyurappa go to Mumbai to participate in BJP national convention? On the same day when when BSY went to Mumbai, bail application hearing had come before CBI special court. And BSY is facing threat of arrest by CBI.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more