ಆಂಟಿ ಮೇಲೆ ಪ್ರೇಮ, ಅಂಕಲ್ ಕೊಂದ ಪ್ರಕಾಶ

ಸ್ಥಳೀಯ ಕಂಟ್ರ್ಯಾಕ್ಟರ್ ಚಿನ್ನಸ್ವಾಮಿರೆಡ್ಡಿ (ಎಂಬ 52 ವರ್ಷದ ಮರ್ಯಾದಸ್ಥನನ್ನು ಪ್ರಕಾಶ ಎಂಬಾತ ಕೊಲೆ ಮಾಡಿದ್ದಾನೆ.
ಚಿನ್ನಸ್ವಾಮಿ ರೆಡ್ಡಿ ಕೆಂಪ ದೊಮ್ಮಸಂದ್ರ ಗ್ರಾಮದಿಂದ ಆನೇಕಲ್ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾದು ಕೂತ್ತಿದ್ದ ಆರೋಪಿ ಪ್ರಕಾಶ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೊಲೆ ನಡೆದ ವೇಳೆ ಮಂಜುಳಾ ಕೂಡಾ ಜೊತೆಗಿದ್ದಳು ಎನ್ನಲಾಗಿದೆ. ಇಬ್ಬರು ಆರೋಪಿಗಳು ಸದ್ಯಕ್ಕೆ ನಾಪತ್ತೆಯಾಗಿದ್ದಾರೆ.
ಮಂಜುಳಾಗೆ ಸುಮಾರು ಐದಾರು ವರ್ಷಗಳಿಂದ ತನ್ನ ಊರಿನ ಪ್ರಕಾಶ್ನೊಂದಿಗೆ ಅನೈತಿಕ ಸಂಬಂಧವಿರಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇದನ್ನು ತಿಳಿದ ಚಿನ್ನಸ್ವಾಮಿ ರೆಡ್ಡಿ ತನ್ನ ಕುಟುಂಬದ ಮರ್ಯಾದೆಯನ್ನು ಕಾಪಾಡುವ ದೃಷ್ಟಿಯಿಂದ ತನ್ನ ಸಂಸಾರವನ್ನು ದೊಮ್ಮಸಂದ್ರದಿಂದ ಅತ್ತಿಬೆಲೆಗೆ ಸ್ಥಳಾಂತರಿಸಿದ್ದ.
ಆದರೆ ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಮಂಜುಳಾಳನ್ನು ಚಿನ್ನಸ್ವಾಮಿ ಕರೆದುಕೊಂಡು ಹೋಗಲು ಬಂದಿದ್ದ. ಆದರೆ, ಮಾರ್ಗಮಧ್ಯೆ ಅಡ್ಡಗಟ್ಟಿದ ಪ್ರಕಾಶ, ಚಿನ್ನಸ್ವಾಮಿ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಮಂಜುಳಾಳೊಂದಿಗೆ ಪರಾರಿಯಾಗಿದ್ದಾನೆ.
ಆನೇಕಲ್ ಠಾಣಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅನೈತಿಕ ಸಂಬಂಧ, ವೈಯಕ್ತಿಕ ದ್ವೇಷ ಇರಬಹುದ ಎಂದು ಶಂಕಿಸಲಾಗಿದೆ. ಆರೋಪಿಗಳ ಹುಡುಕಾಟ ನಡೆದಿದೆ ಎಂದು ಠಾಣಾಧಿಕಾರಿ ಹೇಳಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications