13 ಕಿರು ಅರಣ್ಯ ಉತ್ಪನ್ನಗಳಿಗೆ ಬೆಂಬಲ ಬೆಲೆ

ಅಮೂಲ್ಯ ಕಿರು ಅರಣ್ಯ ಉತ್ಪನ್ನಗಳನ್ನೇ (MFPs) ನಂಬಿ ಜೀವನ ನಡೆಸುತ್ತಿರುವವರು ಹತ್ತಾರು ಕೋಟಿ ಮಂದಿ. ಇವರಲ್ಲಿ ಬಹುತೇಕರು ಬುಡಕಟ್ಟಿನವರು. ಕಿರು ಅರಣ್ಯ ಉತ್ಪನ್ನಗಳೆ ಅವರಿಗೆ ಜೀವನಾಧಾರ. ಆದ್ದರಿಂದ ಪ್ರಮುಖವಾದ 13 ಕಿರು ಅರಣ್ಯ ಉತ್ಪನ್ನಗಳಿಗೆ ಬೆಂಬಲ ಬೆಲೆ ದಕ್ಕಿಸಿಕೊಟ್ಟರೆ ಈ ಗಿರಿಜನರ ಬದುಕು ಹಸನಾದೀತು ಎಂಬುದು ಈ ಯೋಜನೆಯ ಲೆಕ್ಕಾಚಾರ.
ಮತ್ತೊಂದು ಗಮನಾರ್ಹ ಅಂಶವೆಂದರೆ ಕೇಂದ್ರ ಸರಕಾರ ಈ ಯೋಜನೆಯನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನಾಗಿ (MGNREGS) ಪರಿವರ್ತಿಸಲು ನಿರ್ಧರಿಸಿದೆ.
ಅನೇಕ ಅಡೆತಡೆ, ಆಡಳಿತ ಯಂತ್ರ ಅದರಲ್ಲೂ ವಿವಿಧ ರಾಜ್ಯಗಳ ಅರಣ್ಯ ಇಲಾಖೆಗಳು ಈ ಯೋಜನೆಗೆ ಅಡ್ಡಗಾಲು ಹಾಕಿದ್ದವು. ಕೊನೆಗೆ ಎರಡು ಪರಿಣತ ಸಮಿತಿಗಳನ್ನು ರಚಿಸಿ, ಅವುಗಳ ಸಲಹೆ, ಸೂಚನೆಗಳನ್ನು ಕೇಳಲಾಯಿತು. ಕೊನೆಗೂ ಈ ಯೋಜನೆ ಸಾಕಾರಗೊಂಡಿರುವುದು ಸ್ವಾಗತಾರ್ಹವಾಗಿದೆ.
ಬುಡಕಟ್ಟು ಜನಾಂಗಕ್ಕೆ ವರ: ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯು ಬುಡಕಟ್ಟು ಜನಾಂಗಕ್ಕೆ ವರವಾಗಲಿದೆ. ಅವರ ಸಾಮಾಜಿಕ ಮತ್ತು ಆರ್ಥಿಕ ಶ್ರೇಯೋಭಿವೃದ್ಧಿಯಲ್ಲಿ ಇದು ಪ್ರಧಾನ ಪಾತ್ರ ವಹಿಸಲಿದೆ. ಅಂದಹಾಗೆ, ಈ 13 ಕಿರು ಅರಣ್ಯ ಉತ್ಪನ್ನಗಳ ವಾರ್ಷಿಕ ವಹಿವಾಟು ಆರಂಭದ ಹಂತದಲ್ಲೇ (ಗ್ರಾಹಕ ದರದಲ್ಲಿ ಅಲ್ಲ) 3,600 ಕೋಟಿ ರುಪಾಯಿ ಪ್ರಮಾಣದ್ದಾಗಿದೆ.
ಈ 13 ಕಿರು ಅರಣ್ಯ ಉತ್ಪನ್ನಗಳು ಯಾವುವೆಂದರೆ tendu, bamboo, mahua flower, mahua seeds, sal leaves, sal seeds, lac, chironji, wild honey, myrobalan, tamarind, gums ಮತ್ತು karanj.
ಪ್ರಸ್ತುತ ಈ ಕಿರು ಅರಣ್ಯ ಉತ್ಪನ್ನಗಳ ಸಂಗ್ರಹಕಾರರು ಅಂದರೆ ಬುಡಕಟ್ಟು ಜನರನ್ನು ಸ್ಥಳೀಯ ನಾಯಕರು, ವ್ಯಾಪಾರಸ್ಥರು ಮತ್ತು ಪಟ್ಟಭದ್ರ ಹಿತಾಸಕ್ತಿಗಳು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಇದಕ್ಕೆ ಕಡಿವಾಣ ಹಾಕುವುದೇ ಯೋಜನೆಯ ಗುರಿಯಾಗಿದೆ. ಜತೆಗೆ, ನಿರಂತರ ಮತ್ತು ಸುಸ್ಥಿರವಾಗಿ ಈ ಉತ್ಪನ್ನಗಳನ್ನು ಕೊಯ್ಲು ಮಾಡುವುದಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications