ಭಾನುವಾರ ಬೆಂಗ್ಳೂರಲ್ಲಿ ಗೌಡರ ಶಕ್ತಿಪ್ರದರ್ಶನ

ಸಮಾವೇಶದಲ್ಲಿ ಆದಿಚುಂಚನಗಿರಿ ಮಾಹಾಸಂಸ್ಥಾನದ ಬಾಲಗಂಗಾಧರನಾಥ ಸ್ವಾಮೀಜಿಗೆ ಗುರುವಂದನೆ ಸಲ್ಲಿಸಲಾಗುವುದು. ಈ ಸಮಾವೇಶದಲ್ಲಿ ಕೆಲವೊಂದು ನಿರ್ಣಯಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ:
1. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡಬೇಕು.
2. ಕುವೆಂಪು ಮತ್ತು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಭಾವಚಿತ್ರವುಳ್ಳ ಅಂಚೆಚೀಟಿ ಬಿಡುಗಡೆ ಮಾಡಬೇಕು.
3. ಮೈಸೂರು ದಸರಾ ಮಾದರಿಯಲ್ಲಿ ಕೆಂಪೇಗೌಡ ಜಯಂತಿ ಆಚರಿಸಬೇಕು.
4. ಟಂಕಶಾಲೆ ಆರಂಭಿಸಿದ ಕೆಂಪೇಗೌಡರ ಸವಿನೆನಪಿಗಾಗಿ ಅವರ ಭಾವಚಿತ್ರವುಳ್ಳ ನಾಣ್ಯ ಬಿಡುಗಡೆ ಮಾಡಬೇಕು
5. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು.
6. ಬೆಂಗಳೂರು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲು ಕೇಂದ್ರ ಕಾರ್ಯಪ್ರವುತ್ತರಾಗಲು ಒತ್ತಾಯಿಸುವುದು.
ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ಒಕ್ಕಲಿಗ ಬಾಂಧವರಿಗೆ ಬಸ್ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ.
ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ಯಾವ ಯಾವ ನಾಯಕರು ಭಾಗವಹಿಸಲಿದ್ದಾರೆ ಎನ್ನುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಕೆಲ ದಿನಗಳ ಹಿಂದೆ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಸ್ವಾಮೀಜಿಗಳ ನಡುವಣ ಮಾತಿನ ಸಂಘರ್ಷದ ಹಿನ್ನಲೆಯಲ್ಲಿ ನಾಳಿನ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸುತ್ತಾರೆ ಎನ್ನುವುದರ ಬಗ್ಗೆ ಸಮುದಾಯದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.
ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಸಮಾವೇಶಕ್ಕೆ ಗೈರುಹಾಜರು ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹಾಗೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಅನುಮಾನವಿದೆ.
ಸಿಎಂ ಸದಾನಂದ ಗೌಡ, ಇಂಧನ ಸಚಿವೆ ಶೋಭಾ ಕರಂದ್ಲಾಜೆ, ವಿಮಲಾಗೌಡ, ಡಿ ಕೆ ಶಿವಕುಮಾರ್ ಮುಂತಾದವರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications