ಜನಾರ್ದನ ರೆಡ್ಡಿಗೆ ಬೇಲ್ ಏಕೆ? ಜೂ.18ರ ಜೈಲಲ್ಲಿರಲಿ

Gali Janardhana Reddy
ಬೆಂಗಳೂರು, ಜೂ.5: ಸುಮಾರು 480 ಕೋಟಿ ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮಂಗಳವಾರ ಕೂಡಾ ಜಾಮೀನು ಮಂಜೂರಾಗಲಿಲ್ಲ.

ಸಿಬಿಐ ವಿಶೇಷ ನ್ಯಾ ಬಿಎಂ ಅಂಗಡಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜನಾರ್ದನ ರೆಡ್ಡಿ ಹಾಗೂ ನಾಲ್ವರು ಆೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಮಂಗಳವಾರ(ಜೂ.5) ನಡೆಸಿದರು.

ಎಎಂಸಿ(ಅಸೋಸಿಯೇಟೆಡ್ ಮೈನಿಂಗ್ ಕಂಪನಿ) ಹಾಗೂ ಡೆಕ್ಕನ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸೋಲುಂಟಾಗಿದೆ. ಸಿಬಿಐ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಗಾಲಿ ರೆಡ್ಡಿ ಅವರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಸಲ್ಲಿಸಿದ್ದ ಆಕ್ಷೇಪ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ಹಾಗೂ ಸಿಬಿಐ ಒದಗಿಸಿರುವ ಟ್ರಕ್ ಗಟ್ಟಲೇ ದಾಖಲೆಗಳ ಪರಿಶೀಲನೆಗೆ ಸಮಯಾವಕಾಶ ಬೇಕಿರುವುದರಿಂದ ಸದ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜೂ.18ಕ್ಕೆ ಮುಂದೂಡಲಾಯಿತು.

ಕೇಸ್ ಹಿಸ್ಟರಿ: ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಸಿಬಿಐ ವಿಶೇಷ ನ್ಯಾಯಾಲಯ ಎರಡೂ ಕಡೆ ವಾದ ಪ್ರತಿವಾದವನ್ನು ಆಲಿಸಿ, ಮೇ.30ಕ್ಕೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಟ್ರಕ್ ಗಟ್ಟಲೆ ದಾಖಲೆ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಗಾಲಿ ಜನಾರ್ದನ ರೆಡ್ಡಿ ಅವರ ಅಕ್ರಮ ಕುರಿತ ದಾಖಲೆಗಳನ್ನು ಹೊತ್ತ ಸುಮಾರು 9 ಟ್ರಕ್ ಗಳನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಿಲ್ಲಿಸಲಾಗಿತ್ತು.

ನಂತರ ಎಲ್ಲಾ ಸೀಲ್ ಮಾಡಿದ ಬಾಕ್ಸ್ ಗಳಲ್ಲಿದ್ದ ಭಾರಿ ಗಾತ್ರದ ಕಡತಗಳನ್ನು ಕೋರ್ಟಿಗೆ ಒಪ್ಪಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯಬೇಕಿದೆ. ಸರ್ಕಾರಕ್ಕೆ ಕೋಟಿಗಟ್ಟಲೇ ನಷ್ಟವುಂಟಾಗಿದೆ ಎಂದು ಸಿಬಿಐ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾ. ಸುಧೀಂದ್ರರಾವ್ ಅವರು ಪುರಸ್ಕರಿಸಿದರು.

ಸಿಬಿಐ ಸಲ್ಲಿಸಿರುವ ದಾಖಲೆಗಳಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಮಾತ್ರ ಟಾರ್ಗೆಟ್ ಮಾಡಲಾಗಿದ್ದು, 15 ಗಣಿ ಗುತ್ತಿಗೆದಾರ ಸಂಸ್ಥೆಗಳಿಗೆ ರಿಲೀಫ್ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.

2008 ರಿಂದ 2010 ಅವಧಿಯಲ್ಲಿ 15ಕ್ಕೂ ಅಧಿಕ ಗಣಿ ಗುತ್ತಿಗೆ ಸಂಸ್ಥೆಗಳನ್ನು ಗಾಲಿ ರೆಡ್ಡಿ ಪೀಡಿಸಿ ಹಣ ಸಂಗ್ರಹಿಸಿದ ಬಗ್ಗೆ ಸಮಗ್ರ ಮಾಹಿತಿಯನ್ನು ಸಿಬಿಐ ಕಲೆ ಹಾಕಿದೆ. ಆದರೆ, ಚಾರ್ಜ್ ಶೀಟ್ ನಲ್ಲಿ 15 ಕಂಪನಿಯ ಯಾವೊಬ್ಬ ಅಧಿಕಾರಿಯ ಹೆಸರನ್ನು ನಮೂದಿಸದಿರಲು ಸಿಬಿಐ ನಿರ್ಧರಿಸಿದೆ.

ಮೇಲ್ಕಂಡ ಅವಧಿಯಲ್ಲಿ ಸುಮಾರು 2,000 ಕೋಟಿ ರು.ಗೂ ಅಧಿಕ ಮೊತ್ತದ 45 ಲಕ್ಷ ಟನ್ ಗಳಷ್ಟು ಕಬ್ಬಿಣ ಅದಿರನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಆರೋಪ ಹೊರೆಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+