ಆದಿಚುಂಚನಗಿರಿಶ್ರೀ ಮೇಲೆ ಲೋಕಾಯುಕ್ತ ತನಿಖೆ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 166(3)ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮ ಭೂಮಿ ಮಾರಾಟದ ಆರೋಪ ಹೊತ್ತಿರುವ ಬಾಲಗಂಗಾಧರನಾಥ ಸ್ವಾಮೀಜಿ, ವೀರಭದ್ರಯ್ಯ, ಪ್ರಶಾಂತನಾಥ ಸ್ವಾಮೀಜಿ ಅವರ ಮೇಲೆ ತನಿಖೆಗೆ ಮಂಗಳವಾರ(ಜೂ.12) ರಂದು ಲೋಕಾಯುಕ್ತ ವಿಶೇಷ ನ್ಯಾಯಪೀಠ ಆದೇಶಿಸಿದೆ.
ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಲಕ್ಷ್ಮಿನಾರಾಯಣ ಎಂಬುವರು ಲೋಕಾಯುಕ್ತ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದಾರೆ. ಅಲ್ಲದೆ, 23 ಕ್ಕೂ ಅಧಿಕ ಜನರ ಮೇಲೆ ದೂರು ದಾಖಲಾಗಿಸಲಾಗಿದೆ. ಆರಂಭದಲ್ಲಿ ಆರೋಪ ಪಟ್ಟಿಯಲ್ಲಿ ಬಿಬಿಎಂಪಿ ಅಧಿಕಾರಿ ಶಂಕರಲಿಂಗೇ ಗೌಡ ಅವರ ಹೆಸರು ಕಾಣಿಸಿಕೊಂಡಿತ್ತು.
ಆದರೆ, ದೂರುದಾರ ಲಕ್ಷ್ಮಿನಾರಾಯಣ ಅವರು ಕೊನೆ ಕ್ಷಣದಲ್ಲಿ ಪಟ್ಟಿ ತಿದ್ದುಪಡಿ ಮಾಡಿ ಆರೋಪಿಗಳ ಪಟ್ಟಿ ಕೋರ್ಟಿಗೆ ಸಲ್ಲಿಸಿದರು.
ಲಕ್ಷ್ಮಿನಾರಾಯಣ ಅವರು ನೀಡಿದ ದೂರನ್ನು ಸ್ವೀಕರಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮೇ.29ಕ್ಕೆ ಮುಂದೂಡಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಬೆಂಗಳೂರು ದಕ್ಷಿಣ ಭಾಗದಲ್ಲಿರುವ ಹುಳಿಮಾವು ಬಳಿ ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದ ರಾಮಲಿಂಗೇಶ್ವರ ಟ್ರಸ್ಟ್ ಗೆ 15 ಎಕರೆ ಭೂಮಿ ನೀಡಲಾಗಿತ್ತು.
ಅದರೆ ರಾಮಲಿಂಗೇಶ್ವರ ಟ್ರಸ್ಟ್ ನಿಂದ ಸದರಿ ಭೂಮಿಯನ್ನು ಪಡೆದ ಆದಿಚುಂಚನಗಿರಿ ಸ್ವಾಮೀಜಿ ಅವರು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಾನೂನು ಬಾಹಿರವಾಗಿ ಟ್ರಸ್ಟ್ ನಿಂದ ಭೂಮಿ ವರ್ಗಾವಣೆಯಾಗಿದೆ. ಈ ಅಕ್ರಮದಲ್ಲಿ ಸುಮಾರು 27ಕ್ಕೂ ಹೆಚ್ಚು ಜನ ಆರೋಪಿಗಳಿದ್ದಾರೆ. 5 ಜನ ಐಎಎಸ್ ಅಧಿಕಾರಿಗಳಿದ್ದಾರೆ ಎಂದು ತಿಳಿದು ಬಂದಿದೆ.
ಆದಿಚುಂಚನಗಿರಿ ಟ್ರಸ್ಟ್ ನಿಂದ ಶಾಲೆ, ಆಸ್ಪತ್ರೆ, ಕಾಲೇಜುಗಳನ್ನು ನಡೆಸಿಕೊಂಡು ಬರಲಾಗಿದ್ದು, ಎಲ್ಲೂ ಅಕ್ರಮ ನಡೆದಿಲ್ಲ. ಈ ಆರೋಪದಲ್ಲಿ ಹುರುಳಿಲ್ಲ ಎಂದು ಸ್ವಾಮೀಜಿ ಆಪ್ತರು ಪ್ರತಿಕ್ರಿಯಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications