ರೆಡ್ಡಿಗೆ ಬೇಲ್ ವಜಾ. ಕಳಂಕ ಕಳೆದುಕೊಂಡ ಕೋರ್ಟ್

ಓಬಳಾಪುರಂ ಗಣಿ ಸಂಸ್ಥೆ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿ ಅವರಿಗೆ ಮೇ.11ರಂದು ಸಿಬಿಐ ವಿಶೇಷ ನ್ಯಾಯಾಧೀಶ ಪಟ್ಟಾಭಿರಾಮರಾವ್ ಅವರು ಜಾಮೀನು ನೀಡಿದರು.
ಈ ಜಾಮೀನಿನ ಸಲುವಾಗಿ ಪಟ್ಟಾಭಿರಾಮರಾವ್ ಅವರು ಭಾರಿ ಪ್ರಮಾಣದಲ್ಲಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತು. ಈ ಬಗ್ಗೆ ಭ್ರಷ್ಟಾಚಾರ ನಿಯಂತ್ರಣ ದ(ಎಸಿಬಿ) ತನಿಖೆ ನಡೆಸುತ್ತಿದೆ.
ಮೇ.23ರಂದು ಜನಾರ್ದನ ರೆಡ್ಡಿಗೆ ನೀಡಲಾಗಿದ್ದ ಜಾಮೀನಿಗೆ ಆಂಧ್ರ ಪ್ರದೇಶ ಹೈಕೋರ್ಟ್ ತಡೆ ನೀಡಿತ್ತು. ಈಗ ಜಾಮೀನನ್ನು ಸಂಪೂರ್ಣವಾಗಿ ವಜಾ ಮಾಡಲಾಗಿದೆ. ಆದರೆ, ಜನಾರ್ದನ ರೆಡ್ಡಿ ಅವರು ಮತ್ತೊಮ್ಮೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಜಾಮೀನಿಗಾಗಿ ಲಂಚ ಪಡೆದ ಆರೋಪದ ಮೇಲೆ ನ್ಯಾ. ಪಟ್ಟಾಭಿರಾಮರಾವ್ ಅವರನು ಮೇ.31ರಂದು ಅಮಾನತುಗೊಳಿಸಲಾಗಿದೆ.
ಕೇಸ್ ಇತಿಹಾಸ: ಓಬಳಾಪುರಂ ಗಣಿ ಸಂಸ್ಥೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಾಡಿ ವಾರೆಂಟ್ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ.
ಓಎಂಸಿ ಪ್ರಕರಣದಲ್ಲಿ ಗಾಲಿ ರೆಡ್ಡಿ ಪಡೆದಿದ್ದ ಜಾಮೀನನ್ನು ಜೂ.5ರವರೆಗೂ ತಡೆ ಹಿಡಿದು ನಾಂಪಲ್ಲಿ ಸಿಬಿಐ ಕೋರ್ಟ್ ಆದೇಶ ನೀಡಿತ್ತು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರಲು ಆಗುತ್ತಿಲ್ಲ. ಮತ್ತೊಮ್ಮೆ ರೆಡ್ಡಿಗಾಗಿ ಚಂಚಲಗುಡ ಜೈಲು ಬಾಗಿಲು ತೆರೆದುಕೊಳ್ಳುತ್ತಿದೆ.
ಎಎಂಸಿ(ಅಸೋಸಿಯೇಟೆಡ್ ಮೈನಿಂಗ್ ಕಂಪನಿ) ಹಾಗೂ ಡೆಕ್ಕನ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸೋಲುಂಟಾಗಿದೆ. ಸಿಬಿಐ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಗಾಲಿ ಜನಾರ್ದನ ರೆಡ್ಡಿ ಅವರ ಅಕ್ರಮ ಕುರಿತ ದಾಖಲೆಗಳನ್ನು ಹೊತ್ತ ಸುಮಾರು 9 ಟ್ರಕ್ ಗಳನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಿಲ್ಲಿಸಲಾಗಿತ್ತು.
ನಂತರ ಎಲ್ಲಾ ಸೀಲ್ ಮಾಡಿದ ಬಾಕ್ಸ್ ಗಳಲ್ಲಿದ್ದ ಭಾರಿ ಗಾತ್ರದ ಕಡತಗಳನ್ನು ಕೋರ್ಟಿಗೆ ಒಪ್ಪಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯಬೇಕಿದೆ. ಸರ್ಕಾರಕ್ಕೆ ಕೋಟಿಗಟ್ಟಲೇ ನಷ್ಟವುಂಟಾಗಿದೆ ಎಂದು ಸಿಬಿಐ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾ. ಸುಧೀಂದ್ರರಾವ್ ಅವರು ಪುರಸ್ಕರಿಸಿದರು.
ಸಿಬಿಐ ಸಲ್ಲಿಸಿರುವ ದಾಖಲೆಗಳಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಮಾತ್ರ ಟಾರ್ಗೆಟ್ ಮಾಡಲಾಗಿದ್ದು, 15 ಗಣಿ ಗುತ್ತಿಗೆದಾರ ಸಂಸ್ಥೆಗಳಿಗೆ ರಿಲೀಫ್ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.
2008 ರಿಂದ 2010 ಅವಧಿಯಲ್ಲಿ 15ಕ್ಕೂ ಅಧಿಕ ಗಣಿ ಗುತ್ತಿಗೆ ಸಂಸ್ಥೆಗಳನ್ನು ಗಾಲಿ ರೆಡ್ಡಿ ಪೀಡಿಸಿ ಹಣ ಸಂಗ್ರಹಿಸಿದ ಬಗ್ಗೆ ಸಮಗ್ರ ಮಾಹಿತಿಯನ್ನು ಸಿಬಿಐ ಕಲೆ ಹಾಕಿದೆ. ಆದರೆ, ಚಾರ್ಜ್ ಶೀಟ್ ನಲ್ಲಿ 15 ಕಂಪನಿಯ ಯಾವೊಬ್ಬ ಅಧಿಕಾರಿಯ ಹೆಸರನ್ನು ನಮೂದಿಸದಿರಲು ಸಿಬಿಐ ನಿರ್ಧರಿಸಿದೆ.
ಮೇಲ್ಕಂಡ ಅವಧಿಯಲ್ಲಿ ಸುಮಾರು 2,000 ಕೋಟಿ ರು.ಗೂ ಅಧಿಕ ಮೊತ್ತದ 45 ಲಕ್ಷ ಟನ್ ಗಳಷ್ಟು ಕಬ್ಬಿಣ ಅದಿರನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಆರೋಪ ಹೊರೆಸಲಾಗಿದೆ.












Click it and Unblock the Notifications