ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್ ಮೇಲೆ ಲೋಕಾ ಚಾರ್ಜ್ ಶೀಟ್

By Mahesh
|
Google Oneindia Kannada News

Lokayukta Chargesheet DK Shivakumar
ಬೆಂಗಳೂರು, ಜೂ.22: ನಗರದ ಬೆನ್ನಿಗಾನಹಳ್ಳಿ ಜಮೀನು ಡಿ ನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸೇರಿದಂತೆ ಆರು ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ವಿಶೇಷ ನ್ಯಾಯಾ ಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರಂ ಹೋಬಳಿಯ ಬೆನ್ನಿಗಾನಹಳ್ಳಿಯಲ್ಲಿನ ಸರ್ವೆ ನಂ.50/2ರಲ್ಲಿನ 4 ಎಕರೆ 20 ಗುಂಟೆ ಜಮೀನನ್ನು ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದಾಗ ಖರೀದಿಸಿ, ನಂತರ ತಮ್ಮ ಅಧಿಕಾರ ದುರುಪಯೋಗ ಪಡಿಸಿ ಕೊಂಡು ಎಲ್ಲ ದಾಖಲಾತಿಗಳನ್ನು ಕಂದಾಯ ಇಲಾಖೆಯ ಅಧಿಕಾರಿ ಗಳಿಂದ ತಮ್ಮ ಹೆಸರಿಗೆ ವರ್ಗಾಯಿಸಿ ಕೊಂಡಿರುವ ಬಗ್ಗೆ ಸಾಮಾಜಿಕ ಕಾರ್ಯ ಕರ್ತ ಟಿ.ಜೆ.ಅಬ್ರಾಹಂ ಹಾಗೂ ಕೃಷಿಕ ಕಬ್ಬಾಳೇಗೌಡ ಎಂಬವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಡಿ.ಕೆ.ಶಿವಕುಮಾರ್, ಐಎಎಸ್ ಅಧಿಕಾರಿ ಡಾ.ರಾಮೇಗೌಡ, ಜಿಲ್ಲಾ ನೋಂದಣಾಧಿಕಾರಿ ಹಮೀದ್ ಅಲಿ, ನಿವೃತ್ತ ತಹಶೀಲ್ದಾರ್ ಹನುಮಂತ್, ನಿವೃತ್ತ ರಾಜಸ್ವ ನಿರೀಕ್ಷಕ ಚಂದ್ರ ಶೇಖರಯ್ಯ, ಗ್ರಾಮ ಲೆಕ್ಕಿಗ ದೊಡ್ಡ ಹನುಮಯ್ಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಲಾಗಿದೆ.

ಲೋಕಾಯುಕ್ತ ಎಸ್ ಪಿ ಪಿಕೆ ಶಿವಶಂಕರ್, ಡಿವೈಎಸ್ ಪಿ ಪಾಲಾಕ್ಷಯ್ಯ ಅವರಿದ್ದ ತಂಡ ಸುಮಾರು 35 ಪ್ರಶ್ನೆಗಳನ್ನು ಡಿಕೆ ಶಿವಕುಮಾರ್ ಅವರತ್ತ ಎಸೆದು ಉತ್ತರ ಪಡೆಯಲು ಆಗದೆ ಶ್ರಮಪಟ್ಟಿದ್ದರು.

ಡಿಕೆ ಶಿವಕುಮಾರ್ ಅವರ ಅಸಮರ್ಪಕ ಉತ್ತರದಿಂದ ಬೇಸತ್ತ ಲೋಕಾಯುಕ್ತ ಅಧಿಕಾರಿಗಳು, ಬೇರೆ ವಿಧಿವಿಲ್ಲದೆ ಡಿಕೆ ಶಿವಕುಮಾರ್ ಅವರಿಗೆ ದಾಖಲೆ ಸಮೇತ ವಿವರಿಸಲು ಕಾಲಾವಕಾಶ ನೀಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ 5.11 ಎಕರೆ ಜಮೀನನ್ನು ಅಕ್ರಮವಾಗಿ ಡಿ ನೋಟಿಫೈ ಮಾಡಿಸಿಕೊಂಡಿದ್ದ ಆರೋಪವನ್ನು ಡಿಕೆ ಶಿವಕುಮಾರ್ ಹೊಂದಿದ್ದಾರೆ.

ಹಳೆ ಮದರಾಸು ರಸ್ತೆಯ ಬೆನ್ನಿಗಾನಹಳ್ಳಿಯಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕೆ 1984ರಲ್ಲಿಯೇ ಬಿಡಿಎ ನೋಟಿಫೈ ಮಾಡಿದ್ದ 5.11 ಎಕರೆ ಜಮೀನನ್ನು ಡಿಕೆ ಶಿವಕುಮಾರ್ ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 2010ರ ಮಾರ್ಚ್ 13 ರಂದು 5.1 ಎಕರೆ ಜಮೀನನ್ನು ಡಿನೋಟಿಫೈ ಮಾಡಿ ಆದೇಶ ಹೊರಡಿಸಿದ್ದರು.

ಮೆಟ್ರೋ ಟರ್ಮಿನಲ್ ಸಮೀಪ ಇರುವ 1.62 ಕೋಟಿ ರುಪಾಯಿಗೆ ಖರೀದಿ ಮಾಡಲಾಗಿತ್ತು. ಮಾರುಕಟ್ಟೆ ಮೌಲ್ಯ 40 ಕೋಟಿ ರು.ಗೂ ಅಧಿಕವಾಗಿದ್ದರೂ ಕಡಿಮೆ ಬೆಲೆ ಮಾರಾಟ ಮಾಡಲಾಗಿದೆ ಎಂದು ಟಿಜೆ ಅಬ್ರಹಾಂ ಅವರು ಲೋಕಾಯುಕ್ತ ಕೋರ್ಟಿಗೆ ಮೊರೆ ಹೊಕ್ಕಿದ್ದರು.

ಟಿಜೆ ಅಬ್ರಹಾಂ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿದ ನ್ಯಾ. ಎನ್ ಕೆ ಸುಧೀಂದ್ರ ರಾವ್ ಅವರು ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಅವರು ವಿಚಾರಣೆಗೆ ಸರಿಯಾಗಿ ಸ್ಪಂದಿಸದಿದ್ದರೆ, ಲೋಕಾಯುಕ್ತ ಪೊಲೀಸರು ಡಿಕೆಶಿಯನ್ನು ವಶಕ್ಕೆ ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದ್ದಾರೆ.ಪ್ರಕರಣದ ವಿಚಾರಣೆ ಯನ್ನು ಜುಲೈ 3ಕ್ಕೆ ಮುಂದೂಡಲಾಗಿದೆ.

English summary
Lokayukta police filed chargesheet against congress leader DK Shivakumar in Benniganahalli Land de notification case. Former CM BS Yeddyurappa is co accused in the case. Both the accused can be detained and quizzed by Lokayukta police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X