ಬಳ್ಳಾರಿ ಶಾಂತಾಗೆ ರಿಲೀಫ್, ಮತ ಎಣಿಕೆಗೆ ಸುಪ್ರೀಂ ತಡೆಯಾಜ್ಞೆ

ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸಂಸದೆ ಜೆ ಶಾಂತಾ ಅವರು ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. ತೀರ್ಪು ಹೊರಬಿದ್ದ ನಂತರ ನಿರಾಳವಾದ ಶಾಂತಾ ಅವರು ಈಗ ಲೋಕಸಭಾ ಕಲಾಪದಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದಿದ್ದಾರೆ. ಆದರೆ, ಪ್ರಕರಣ ಇತ್ಯರ್ಥಗೊಳ್ಳುವವರೆಗೂ ಮತದಾನ ಮಾಡುವ ಹಕ್ಕು ಹಿಂಪಡೆಯಲಾಗಿದೆ. ಸಂಸದರ ವೇತನ ಹಾಗೂ ಭತ್ಯೆಗಳನ್ನು ಪಡೆಯದಂತೆ ಆದೇಶದಲ್ಲಿ ಸೂಚಿಸಲಾಗಿದೆ.
ನ್ಯಾ ಶೈಲೇಂದ್ರ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಆದೇಶ 2009ರ ಲೋಕಸಭೆ ಚುನಾವಣೆ ಅಕ್ರಮ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಮರು ಮತ ಎಣಿಕೆಗೆ ಆದೇಶ ನೀಡಿತ್ತು. ಆಡಳಿತಾರೂಢ ಬಿಜೆಪಿ ಸರ್ಕಾರ, ಬಳ್ಳಾರಿ ಗಾಲಿ ರೆಡ್ಡಿ ಕುಟುಂಬ, ಬಳ್ಳಾರಿ ಪಕ್ಷೇತರ ಶಾಸಕ ಶ್ರೀರಾಮುಲು ಅವರಿಗೆ ತೀವ್ರ ಮುಜುಗರ ಉಂಟಾಗಿತ್ತು.
ಆದರೆ, ನಂದೀಶ್ ರೆಡ್ಡಿ ಪ್ರಕರಣದಲ್ಲಿ ಆರು ತಿಂಗಳೊಳಗೆ ಮರು ಚುನಾವಣೆ ನಡೆಸುವಂತೆ ಸೂಚಿಸಿದ್ದ ನ್ಯಾಯಪೀಠ, ಈ ಪ್ರಕರಣದಲ್ಲಿ ಮರು ಮತಎಣಿಕೆಗೆ ಆದೇಶಿಸಿದೆ. 4 ವಾರಗಳ ಒಳಗೆ ಮರು ಮತ ಎಣಿಕೆ ಯಾಗಬೇಕಿದೆ. ಜೂ.11 ರಿಂದ ಶಾಂತಾ ಅವರು ಸಂಸತ್ತಿಗೆ ಕಾಲಿಡುವಂತಿರಲಿಲ್ಲ.
ಏನಿದು ಪ್ರಕರಣ?: ಬಳ್ಳಾರಿಯಲ್ಲಿ 2009ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿಸುಳ್ಳು ಜಾತಿ ನಮೂದು ಹಾಗೂ ಚುನಾವಣೆ ಅಕ್ರಮ ನಡೆಸಿ ಶ್ರೀಮತಿ ಜೆ. ಶಾಂತಾ ಅವರು ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಚಂದ್ರೇಗೌಡ ಎಂಬುವವರು ತಕರಾರು ಅರ್ಜಿ ಸಲ್ಲಿಸಿದ್ದರು.
ಬಳ್ಳಾರಿಯ ದೇವಿನಗರ ಕ್ಲಬ್ ರಸ್ತೆ, 2ನೇ ಅಡ್ಡರಸ್ತೆಯ ನಿವಾಸಿಯಾದ ಶ್ರೀಮತಿ ಜೆ ಶಾಂತಾ ನಾಗರಾಜು 2009 ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಶಾಂತಾ ಅವರು ವಾಲ್ಮೀಕಿ ಜನಾಂಗಕ್ಕೆ ಸೇರಿರುವುದಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಭ್ಯರ್ಥಿ ಅರ್ಜಿಯಲ್ಲಿ ನಮೂದಿಸಿದ್ದರು.
ಆದರೆ, ಅವರು ಬೋವಿ ಜಾತಿಗೆ ಸೇರಿದ್ದಾರೆ. ಹಾಗಾಗಿ ಮೀಸಲಾತಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಎಂದು ಚಂದ್ರಗೌಡ ಅವರ ಪರ ವಕೀಲ ಕಾಂತರಾಜ್ ಅವರು ವಾದಿಸಿದ್ದರು.
ಮರು ಎಣಿಕೆ ಸಾಧ್ಯತೆ: 2009ರಲ್ಲಿ ಚುನಾವಣೆ ನಡೆದಿರುವುದರಿಂದ ಅಂದು ಅಕ್ರಮ ಮತ ಎಣಿಕೆ ನಡೆದಿದೆ ಎಂದು ಸಾಬೀತು ಮಾಡಿದರು. ಅದೇ ಮತ ಎಣಿಕೆ ಯಂತ್ರಗಳನ್ನು ಬಳಸಿ ಮರು ಎಣಿಕೆ ಮಾಡಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವಿಸಿತ್ತು.
ಮತ ಎಣಿಕೆಯಲ್ಲಿ ವೋಟಿಂಗ್ ಮೆಷಿನ್ ಬದಲಾಯಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮೂರು ವರ್ಷದ ಮೊದಲೇ ನಾವು ಮತ ಎಣಿಕೆ ಯಂತ್ರಗಳನ್ನು ಯಥಾಸ್ಥಿತಿಯಲ್ಲಿ ಕಾಯ್ದಿರಿಸುವಂತೆ ಕೋರ್ಟ್ ಗೆ ಮನವಿ ಸಲ್ಲಿಸಿ ಆದೇಶ ಪಡೆದಿದ್ದೆವು. ಹಾಗಾಗಿ, ಅದೇ ಮತ ಎಣಿಕೆ ಯಂತ್ರಗಳ ಮೂಲಕ ಮರು ಎಣಿಕೆ ಸಾಧ್ಯ ಎಂದು ವಕೀಲ ಕಾಂತರಾಜ್ ಸ್ಪಷ್ಟಪಡಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಬಳ್ಳಾರಿ ಜಿಲ್ಲಾಧಿಕಾರಿ ಬಿಶ್ವಾಸ್ ಅವರು ಜುಲೈ 5 ರಂದು ಮತ ಎಣಿಕೆಗೆ ಅವಕಾಶ ನೀಡವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.
15ನೇ ಸುತ್ತಿನ ತನಕ ಲೀಡ್ ನಲ್ಲಿದ್ದೆ 2 ನಿಮಿಷದಲ್ಲಿ 2 ಸುತ್ತಿನ ಎಣಿಕೆ ಮುಗಿಸಿಬಿಟ್ಟರು. 1,120 ಮತಗಳ ಅಂತರದಿಂದ ಸೋಲು ಕಾಣಬೇಕಾಯಿತು. ಕೊನೆ ಸುತ್ತಿನ ಎಣಿಕೆಯಲ್ಲಿ ವ್ಯತ್ಯಯವಾಗಿದೆ ಎಂದು ಪರಾಜಿತ ಅಭ್ಯರ್ಥಿ ಹನುಮಂತಪ್ಪ ಹೇಳಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications