ಎಎಂಸಿ : ರೆಡ್ಡಿ ಬಂಧನ ವಿಸ್ತರಣೆ, ಅರುಣಾಗೆ ಸಮನ್ಸ್

Janardhana Reddy's remand extended
ಬೆಂಗಳೂರು, ಜು.2: ಅಸೋಸಿಯೇಟೆಡ್ ಮೈನಿಂಗ್ ಕಂಪನಿ(ಎಎಂಸಿ) ಗಣಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಸೋಮವಾರ(ಜು.2) ನಡೆಯಿತು. ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಜು.10 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ನ್ಯಾ. ಎಂಎಸ್ ಅಂಗಡಿ ಅವರು ಆದೇಶ ನೀಡಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಲಾಗಿದೆ.

ಲಕ್ಷ್ಮಿ ಅವರು ಡೆಕ್ಕನ್ ಮೈನಿಂಗ್ ಸಿಂಡಿಕೇಟ್ (DMS) ಹಾಗೂ ಅಸೋಸಿಯೇಟೆಡ್ ಮೈನಿಂಗ್ ಕಾರ್ಪೋರೇಷನ್ (AMC) ಸಂಸ್ಥೆಯ ಸಹ ಮಾಲೀಕರಾಗಿದ್ದಾರೆ.

ಬಂಧನ ಅವಧಿ ವಿಸ್ತರಣೆ: ಇದೇ ವೇಳೆ ಗಾಲಿ ಜನಾರ್ದನ ರೆಡ್ಡಿ, ಮೆಹಫುಜ್ ಅಲಿ ಖಾನ್ ಹಾಗೂ ಇತರೆ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ. ಆ.4ರಂದು ಗಾಲಿ ರೆಡ್ಡಿಗೆ ಜಾಮೀನು ನೀಡುವುದರ ಬಗ್ಗೆ ವಿಚಾರಣೆ ಕೈಗೊಳ್ಳಲಾಗುವುದು ಎಂದು ನ್ಯಾ.ಎಂಎಸ್ ಅಂಗಡಿ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ, ಮೆಹಫುಜ್ ಖಾನ್ ಅಲ್ಲದೆ ಬಳ್ಳಾರಿ ಉಪ ಅರಣ್ಯ ಸರಂಕ್ಷಣಾಧಿಕಾರಿ ಎಸ್ ಮುತ್ತಯ್ಯ. ಆಗಿನ ಹೊಸಪೇಟೆ ಗಣಿ ಮತ್ತು ಭೂಗರ್ಭ ಇಲಾಖೆ ಉಪ ನಿರ್ದೇಶಕ ಎಸ್ ಪಿ ರಾಜು ಹಾಗೂ ಸಂಡೂರು ತಾಲೂಕಿನ ರೇಂಜ್ ಅರಣ್ಯ ಅಧಿಕಾರಿ ಮಹೇಶ್ ಪಾಟೀಲ್ ಅವರು ಸಹ ಆರೋಪಿಗಳಾಗಿದ್ದು, ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಕೇಸ್ ಹಿಸ್ಟರಿ: ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಸಿಬಿಐ ವಿಶೇಷ ನ್ಯಾಯಾಲಯ ಎರಡೂ ಕಡೆ ವಾದ ಪ್ರತಿವಾದವನ್ನು ಆಲಿಸಿ, ಮೇ.30 ಹಾಗೂ ಜೂ.5ಕ್ಕೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಗಾಲಿ ಜನಾರ್ದನ ರೆಡ್ಡಿ ಅವರ ಅಕ್ರಮ ಕುರಿತ ದಾಖಲೆಗಳನ್ನು ಹೊತ್ತ ಸುಮಾರು 9 ಟ್ರಕ್ ಗಳನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಿಲ್ಲಿಸಲಾಗಿತ್ತು.

ನಂತರ ಎಲ್ಲಾ ಸೀಲ್ ಮಾಡಿದ ಬಾಕ್ಸ್ ಗಳಲ್ಲಿದ್ದ ಭಾರಿ ಗಾತ್ರದ ಕಡತಗಳನ್ನು ಕೋರ್ಟಿಗೆ ಒಪ್ಪಿಸಲಾಯಿತು. 'ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯಬೇಕಿದೆ. ಸರ್ಕಾರಕ್ಕೆ ಕೋಟಿಗಟ್ಟಲೇ ನಷ್ಟವುಂಟಾಗಿದೆ' ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು .

ಸಿಬಿಐ ಸಲ್ಲಿಸಿರುವ ದಾಖಲೆಗಳಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಮಾತ್ರ ಟಾರ್ಗೆಟ್ ಮಾಡಲಾಗಿದ್ದು, 15 ಗಣಿ ಗುತ್ತಿಗೆದಾರ ಸಂಸ್ಥೆಗಳಿಗೆ ರಿಲೀಫ್ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.

2008 ರಿಂದ 2010 ಅವಧಿಯಲ್ಲಿ 15ಕ್ಕೂ ಅಧಿಕ ಗಣಿ ಗುತ್ತಿಗೆ ಸಂಸ್ಥೆಗಳನ್ನು ಗಾಲಿ ರೆಡ್ಡಿ ಪೀಡಿಸಿ ಹಣ ಸಂಗ್ರಹಿಸಿದ ಬಗ್ಗೆ ಸಮಗ್ರ ಮಾಹಿತಿಯನ್ನು ಸಿಬಿಐ ಕಲೆ ಹಾಕಿದೆ. ಆದರೆ, ಚಾರ್ಜ್ ಶೀಟ್ ನಲ್ಲಿ 15 ಕಂಪನಿಯ ಯಾವೊಬ್ಬ ಅಧಿಕಾರಿಯ ಹೆಸರನ್ನು ನಮೂದಿಸದಿರಲು ಸಿಬಿಐ ನಿರ್ಧರಿಸಿತ್ತು.

ಮೇಲ್ಕಂಡ ಅವಧಿಯಲ್ಲಿ ಸುಮಾರು 2,000 ಕೋಟಿ ರು.ಗೂ ಅಧಿಕ ಮೊತ್ತದ 45 ಲಕ್ಷ ಟನ್ ಗಳಷ್ಟು ಕಬ್ಬಿಣ ಅದಿರನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಆರೋಪ ಹೊರೆಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+