ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಆನ್‌ಲೈನ್‌ನಲ್ಲಿ ಲಭ್ಯ

Posted By:
Subscribe to Oneindia Kannada
Karnataka SSLC 2012 supplementary results on July 12
ಬೆಂಗಳೂರು, ಜು. 12 : 2012ನೇ ಸಾಲಿನ ಕರ್ನಾಟಕ ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆಯ ಫಲಿತಾಂಶ ಒನ್ಇಂಡಿಯಾ ಅಂತರ್ಜಾಲ ತಾಣ ಸೇರಿದಂತೆ ಕೆಲ ವೆಬ್ ಸೈಟ್‌ಗಳಲ್ಲಿ ಜುಲೈ 12, ಗುರುವಾರ ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಆಯಾ ಶಾಲೆಗಳಲ್ಲಿ ಜು.13ರಂದು ಬೆಳಿಗ್ಗೆ ಫಲಿತಾಂಶ ಲಭ್ಯವಾಗಲಿದೆ. [ಫಲಿತಾಂಶ ಈಗ ಲಭ್ಯ]

ಜೂನ್ ತಿಂಗಳಲ್ಲಿ ನಡೆದ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ 1.6 ಲಕ್ಷ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ತೆಗೆದುಕೊಂಡಿದ್ದರು. ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 17ರಂದು ಪ್ರಕಟಿಸಲಾಗಿತ್ತು. ಈ ವರ್ಷ ದಾಖಲೆ ಫಲಿತಾಂಶ ಹೊರಬಂದಿತ್ತು. 8 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ.76.13ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. 2 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅನುತ್ತೀರ್ಣಗೊಂಡಿದ್ದರು. ಶೇ.25ರಷ್ಟು ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ.

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಒಂದು ಅಮೂಲ್ಯ ವರ್ಷ ಹಾಳಾಗಬಾರದೆಂದು, ಉತ್ತೀರ್ಣರಾದವರಿಗೆ ಕಾಲೇಜು ಸೀಟು ಸಿಗಲು ಅನುವಾಗುವುದೆಂಬ ಉದ್ದೇಶದಿಂದ ಸಪ್ಲಿಮೆಂಟರಿ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ಇಡಲಾಗಿತ್ತು. ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಸಪ್ಲಿಮೆಂಟರಿ ಪರೀಕ್ಷೆ ಇಡುತ್ತಿದ್ದರಿಂದ ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತಿತ್ತು.

ಕರ್ನಾಟಕದಲ್ಲಿ ಶಿಕ್ಷಣದ ಮಟ್ಟ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲಿ ಕಲಿಕೆಯ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದಾಗ ಹೇಳಿದ್ದರು. [ಫಲಿತಾಂಶ ತಿಳಿಯಲು ಇಲ್ಲಿ ಕ್ಲಿಕ್ಕಿಸಿ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Secondary Education Examination Board (KSEEB) will be announcing SSLC 2012 supplementary examination results on July 12, 2012 Thursday evening on websites including Oneindia. In the main exam 76.13% record students had passed.
Please Wait while comments are loading...