ನಾನು ಬಿಜೆಪಿ ರಾಜ್ಯಾಧ್ಯಕ್ಷ ಆಕಾಂಕ್ಷಿಯಲ್ಲ: ಅನಂತ್ ಕುಮಾರ್

Posted By:
Subscribe to Oneindia Kannada
ಬೆಂಗಳೂರು, ಜು.13: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಹಾಗೂ ನಾನು ರಾಜ್ಯ ರಾಜಕೀಯಕ್ಕೆ ಮರಳುವ ಸಂಭವವಿಲ್ಲ. ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ನಾನು ಲಾಬಿ ನಡೆಸಿಲ್ಲ. ಈ ಬಗ್ಗೆ ವರದಿ ಎಲ್ಲವೂ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಶುಕ್ರವಾರ(ಜು.13) ಹೇಳಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿದು ಜಗದೀಶ್ ಶೆಟ್ಟರ್ ಅವರ ಸಂಪುಟ ಸೇರಿ ಉಪ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ ಅನಂತ್ ಅವರು ರಾಜ್ಯ ರಾಜಕೀಯಕ್ಕೆ ಮರಳುವ ಸುದ್ದಿ ಹಬ್ಬಿತ್ತು.

ನಿರ್ಗಮಿತ ಮುಖ್ಯಮಂತ್ರಿ ಸದಾನಂದ ಗೌಡ ಅವರಿಗೆ ರಾಷ್ಟ್ರಮಟ್ಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಿ (ಪ್ರಧಾನ ಕಾರ್ಯದರ್ಶಿ ಸ್ಥಾನ?)ದ ನಂತರ ಅನಂತ್ ಕುಮಾರ್ ಅವರು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಲಿದ್ದಾರೆ. ಈ ಬಗ್ಗೆ ನಿರ್ಣಯ ಕೈಗೊಳ್ಳಲು ಹೈಕಮಾಂಡ್ ಕಾಲಾವಕಾಶ ಕೇಳಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಆದರೆ, ವರದಿಯನ್ನು ತಳ್ಳಿ ಹಾಕಿರುವ ಅನಂತ್ ಕುಮಾರ್ ಅವರು, 2014ರ ಲೋಕಸಭೆ ಚುನಾವಣೆ ಜವಾಬ್ದಾರಿ ನನ್ನ ಮೇಲಿದೆ. ಸದ್ಯಕ್ಕಂತೂ ನಾನು ರಾಜ್ಯ ರಾಜಕೀಯಕ್ಕೆ ಮರಳುವುದಿಲ್ಲ ಎಂದು ಅನಂತ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಸೆಂಬ್ಲಿ ಚುನಾವಣೆಗೆ ಶೆಟ್ಟರ್ ನಾಯಕತ್ವ: 2013ರ ವಿಧಾನಸಭಾ ಚುನಾವಣೆಯನ್ನು ಹಾಲಿ ಸಿಎಂ ಜಗದೀಶ್ ಶೆಟ್ಟರ್ ಅವರ ನಾಯಕತ್ವದಲ್ಲಿ ಎದುರಿಸಲಿದೆ. ಶೆಟ್ಟರ್ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ ಎಂದು ಅನಂತ್ ಹೇಳಿದ್ದಾರೆ.

ಈ ಮೂಲಕ 2008ರಲ್ಲಿ ಪಕ್ಷವನ್ನು ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪ ಅವರಿಗೆ ಪರ್ಯಾಯವಾಗಿ ಶೆಟ್ಟರ್ ಅವರನ್ನು ಬೆಳೆಸಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಸೂಚನೆಯನ್ನು ಅನಂತ್ ನೀಡಿದ್ದಾರೆ.

ಕಳೆದ 35 ವರ್ಷದಿಂದ ನಾನು ಶೆಟ್ಟರ್ ಅವರನ್ನು ಚೆನ್ನಾಗಿ ಬಲ್ಲೆ. ಎಬಿವಿಪಿ ಕಾಲದಿಂದಲೂ ಅವರ ಹೋರಾಟ ಮನೋಭಾವವನ್ನು ಮೆಚ್ಚಿದ್ದೇನೆ. ಆರೆಸ್ಸೆಸ್ ಕಲಿಸಿದ ಶಿಸ್ತು ಮೈಗೂಡಿಸಿಕೊಂಡಿದ್ದಾರೆ. ಅವರು ಸಮರ್ಥ ನಾಯಕರಾಗಿ ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲಿದ್ದಾರೆ ಎಂದು ಅನಂತ್ ಕುಮಾರ್ ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
National general secretary of the BJP, H.N. Ananth Kumar has denied rumours about him becoming party state president and returning to state politics. Ananthkumar also stated that new Chief Minister Jagadish Shettar will lead the party in the 2013 Assembly elections.
Please Wait while comments are loading...