ಐಐಎಂಬಿಯಿಂದ ಮಹಿಳಾ ಸಬಲೀಕರಣಕ್ಕಾಗಿ i-WIL

ಐಐಎಂ-ಬೆಂಗಳೂರಿನ ಸೆಂಟರ್ ಫಾರ್ ಪಬ್ಲಿಕ್ ಪಾಲಿಸಿ ಮತ್ತು ನವದೆಹಲಿಯ ಸೆಂಟರ್ ಫಾರ್ ಸೋಶಿಯಲ್ ರಿಸರ್ಚ್ (ಸಿಎಸ್ಆರ್) ಇವುಗಳ ಕಲ್ಪನೆಯ ಕೂಸಾಗಿರುವ ಈ ಕಾರ್ಯಕ್ರಮವನ್ನು ರಾಜಸ್ತಾನದ ರಾಜ್ಯಪಾಲೆಯಾಗಿರುವ ಮಾರ್ಗರೆಟ್ ಆಳ್ವಾ ಅವರು ದೀಪ ಬೆಳಗುವ ಮುಖಾಂತರ ವಿಧ್ಯುಕ್ತವಾಗಿ ಉದ್ಘಾಟಿಸಿದರು.
ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಕ್ರಿಯಾಶೀಲರಾಗಿರುವ 30 ಮಹಿಳೆಯರು 10 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ಬಯೋಕಾನ್ ಚೇರ್ ವುಮನ್ ಆಗಿರುವ ಕಿರಣ್ ಮಜುಂದಾರ್ ಷಾ ಅವರಿಂದ ಸ್ಕಾಲರ್‌ಶಿಪ್ ಕೂಡ ನೀಡಲಾಗುತ್ತಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಮಾರ್ಗರೆಟ್ ಆಳ್ವಾ ಅವರು, ರಾಜಕೀಯವನ್ನೇ ವೃತ್ತಿಯಾಗಿ ಸ್ವೀಕರಿಸಿ ಯಶಸ್ಸು ಕಂಡಿರುವ ತಮ್ಮದೇ ಉದಾಹರಣೆ ನೀಡಿದರು ಮತ್ತು ರಾಜಕೀಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬರಬೇಕು ಎಂದು ಆಶಿಸಿದರು. ಈ ಕಾರ್ಯಕ್ರಮದಲ್ಲಿ ರಾಜಕೀಯ ನೈಪುಣ್ಯತೆ, ವೈಯಕ್ತಿಕ ಅಭಿವೃದ್ಧಿ, ಲಿಂಗ ಅಭಿವ್ಯಕ್ತಿ ಮತ್ತು ಸಿದ್ಧಾಂತದ ಬಗ್ಗೆ ತರಬೇತಿ ನೀಡುತ್ತಿರುವ ಬಗ್ಗೆ ಶ್ಲಾಘಿಸಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಥವರೊಂದಿಗೆ ಕೆಲಸ ಮಾಡಿರುವ ಆಳ್ವಾ ಅವರು, ಐ-ವಿಲ್ ಮುಖಾಂತರ ರಾಜ್ಯ ಮತ್ತು ಪಕ್ಷಭೇದ ತೊರೆದು ಕೆಲಸ ಮಾಡುವ ಅಪೂರ್ವ ಅವಕಾಶ ಒದಗಿಬಂದಿದೆ, ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಾವು ಮುಂದೆ ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ ಎಂದು ನುಡಿದರು.
ಈ ಕಾರ್ಯಕ್ರಮದ ರೂವಾರಿಯಾಗಿರುವ, ಐಐಎಂ-ಬಿ ಪ್ರೊಫೆಸರ್ ಆಗಿರುವ ರಾಜೀವ್ ಗೌಡ ಅವರು ಈ ಸಂದರ್ಭದಲ್ಲಿ ಮಾತನಾಡುತ್ತ, ಸಮಾಜ ಸೇವೆಗೆ ತುಡಿಯುವಂಥ, ನಿಸ್ಸಹಾಯಕರ ಬಗ್ಗೆ ಅನುಕಂಪ, ಆಡಳಿತದಲ್ಲಿ ವೃತ್ತಿಪರತೆ ತೋರುವಂಥ, ದೂರದೃಷ್ಟಿಯಿರುವಂತಹ ಮೌಲ್ಯಯುತ ನಾಯಕರ ಅಗತ್ಯ ಇಂದಿನ ರಾಜಕಾರಣದಲ್ಲಿ ತುಂಬ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮ ಭದ್ರ ಅಡಿಪಾಯ ಹಾಕಿ, ಬದಲಾವಣೆಯ ಹರಿಕಾರರಾಗಲು ಮಹಿಳೆಯರಿಗೆ ಅವಕಾಶ ಮಾಡಿಕೊಡುತ್ತದೆ ಎಂದರು.
ವಿಶ್ವಸಂಸ್ಥೆ ಮಹಿಳಾ ಘಟಕದ ಸೂರಜ್ ಕುಮಾರ್, ಸಿಎಸ್ಆರ್ ನಿರ್ದೇಶಕಿ ಡಾ. ರಂಜನಾ ಕುಮಾರಿ, ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದ ಸುಮೀತಾ ಬ್ಯಾನರ್ಜಿ ಮುಂತಾದವರು ಮಾತನಾಡಿ ತಮ್ಮ ಸಂಸ್ಥೆಗಳು ಮಹಿಳಾ ಸಬಲೀಕರಣದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications