ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಮನೂರು ಶಿವಶಂಕರಪ್ಪಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ?

By Mahesh
|
Google Oneindia Kannada News

Shamanur Shivashankarappa
ನವದೆಹಲಿ, ಜು.26: 'ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಇಚ್ಛೆಯ ಮೇರೆಗೆ ನಾನು ದೆಹಲಿ ಬಂದು ಅವರನ್ನು ಭೇಟಿ ಮಾಡಿದ್ದೇನೆ. ರಾಜ್ಯ ರಾಜಕೀಯ ಸ್ಥಿತಿ ಗತಿ ಬಗ್ಗೆ ರಾಹುಲ್ ಆವರೊಂದಿಗೆ ಚರ್ಚಿಸಿದ್ದೇನೆ. ನಾನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಕಾಂಕ್ಷಿ' ಎಂದು ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಗುರುವಾರ(ಜು.26) ಹೇಳಿದ್ದಾರೆ.

ತುಘಲಕ್ ಮಾರ್ಗದಲ್ಲಿರುವ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಶಿವಶಂಕರಪ್ಪ ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಶಂಕರಪ್ಪ ಅವರು, 'ಮುಂಬರುವ ಚುನಾವಣಾ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಅನಿವಾರ್ಯವಾಗಿದೆ. ಚುನಾವಣೆಯ ಮತ ಲೆಕ್ಕಾಚಾರದ ಬಗ್ಗೆ ರಾಹುಲ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ' ಎಂದು ಹೇಳಿದರು.

ಮುಂದಿನ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದಲ್ಲಿ 27% ಇರುವ ಲಿಂಗಾಯತ ಮತಗಳನ್ನು ಸೆಳೆಯಲು ಪ್ರಬಲ ಲಿಂಗಾಯತ ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಎಐಸಿಸಿ ಮನಸ್ಸು ಮಾಡಿದ್ದು, ಶೀಘ್ರದಲ್ಲೇ ಈ ಬಗ್ಗೆ ಸೂಚನೆ ಹೊತ್ತ ಲಕೋಟೆ ದೆಹಲಿಯಿಂದ ಕೆಪಿಸಿಸಿ ಕಚೇರಿ ತಲುಪುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿದ್ದ ಅಸಮಾಧಾನ ಬೆಂಕಿ ಬಹಿರಂಗವಾಗಿ ಸ್ಫೋಟಗೊಂಡಿತ್ತು.ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ನಡೆದ ಬಹುತೇಕ ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿರುವ ಜೊತೆಗೆ ಭಾರಿ ಹಿನ್ನಡೆ ಸಾಧಿಸಿರುವುದನ್ನು ಲಿಂಗಾಯತ ಮುಖಂಡರು ಪಟ್ಟಿ ಮಾಡಿ ಹಿರಿಯ ನಾಯಕರಿಗೆ ತಲುಪಿಸಿದ್ದಾರೆ.

ಇದೀಗ ಚುನಾವಣಾ ಹೊಸ್ತಿಲಲ್ಲಿ ಇರುವ ಸಂದರ್ಭದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಗಾದಿಗೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ನಡೆದ ಬಹುತೇಕ ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿರುವ ಜೊತೆಗೆ ಭಾರಿ ಹಿನ್ನಡೆ ಸಾಧಿಸಿದ್ದಾರೆ.

ಹಳೆ ತಂತ್ರ ಅನುಸರಿಸಿ: 1989-99 ಚುನಾವಣಾ ಸಂದರ್ಭದಲ್ಲಿ ವರಿಷ್ಠರು ರೂಪಿಸಿದ್ದ ಕಾರ್ಯತಂತ್ರವನ್ನೇ ಈ ಭಾರಿಯೂ ಅನುಸರಿಸಿ ಎಂದು ಎಐಸಿಸಿಗೆ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.

1989ರಲ್ಲಿ ವೀರೇಂದ್ರಪಾಟೀಲ್, 99ರಲ್ಲಿ ಎಸ್.ಎಂ.ಕೃಷ್ಣ ಅವರ ಸಾರಥ್ಯದಲ್ಲಿ ಚುನಾವಣೆ ಎದುರಿಸಿದಾಗ ಪಕ್ಷಕ್ಕೆ ಬಹುಮತ ದೊರೆತು, ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಅದೇ ಕಾರ್ಯತಂತ್ರವನ್ನು ಅನುಸರಿಸಿ ಪ್ರಬಲ ವರ್ಗದ ನಾಯಕರೊಬ್ಬರಿಗೆ ಪಕ್ಷದ ರಾಜ್ಯಾಧ್ಯಕ್ಷ ಪಟ್ಟ ನೀಡಬೇಕು ಎಂದು ಕೋರಲಾಗಿದೆ.

ವೀರಶೈವರಿಗೆ ನಾಯಕತ್ವ ನೀಡಬೇಕು. ಬಿಜೆಪಿಯತ್ತ ವಾಲಿರುವ ಲಿಂಗಾಯತರನ್ನು ಪುನಃ ಕಾಂಗ್ರೆಸ್ ನತ್ತ ಒಲಿಸಿಕೊಳ್ಳಲು ಕೆಪಿಸಿಸಿಯಲ್ಲಿ ಬದಲಾವಣೆ ಅನಿವಾರ್ಯ ಎಂಉ ಖಾಯಂ ಖಜಾಂಜಿಯೂ ಆಗಿರುವ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ಸಿನ ಯುವರಾಜ ರಾಹುಲ್ ಗಾಂಧಿ ಅವರಿಗೆ ಹೇಳಿದ್ದಾರೆ.

ಇತ್ತೀಚೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ವಿಪಕ್ಷ ನಾಯಕ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡೀಸ್ ಅವರು ಸಭೆ ನಡೆಸಿ ಮಾತುಕತೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Shamanur Shivashankarappa is leading the race for Congress Committee (KPCC) and Congress Legislative Party (CLP) in the state post. Shivashankarappa today(Jul.26) met AICC genereal secreatary Rahul Gandhi and discussed about KPCC presidentship post and current political scenario in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X