ಕೋಲಾರಕ್ಕೆ 2.15 ಕೋಟಿ ವೆಚ್ಚದ ಬಸ್ ನಿಲ್ದಾಣ

R Ashok
ಕೋಲಾರ, ಜು. 29 : ಕೋಲಾರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲೆಯ ಸಾರಿಗೆ ವ್ಯವಸ್ಥೆ ಸುಧಾರಣೆಗೆ ತಕ್ಕಂತೆ ನೂತನ ಹೈಟೆಕ್ ಬಸ್ ನಿಲ್ದಾಣ ನಿರ್ಮಾ ಣಕ್ಕೆ 2.15 ಕೋ.ರೂ. ಮಂಜೂರು ಮಾಡಲಾಗಿದೆ ಎಂದು ಉಪ ಮುಖ್ಯ ಮಂತ್ರಿ ಹಾಗೂ ಗೃಹ ಮತ್ತು ಸಾರಿಗೆ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ. ಈ ಮೂಲಕ ಕೋಲಾರ ಜನತೆಯ ದಶಕದ ಕನಸು ನನಸಾಗಲಿದೆ.

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಗರಕ್ಕೆ 10 ಹೊಸ ಬಸ್ ಗಳನ್ನು ಸರ್ಮಪಿಸಿ ನೂತನ ನಗರ ಸಾರಿಗೆಗೆ ಆರ್. ಅಶೋಕ್ ಚಾಲನೆ ನೀಡಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಪ್ರತಿದಿನ 2.5 ಲಕ್ಷ ಜನರು ಸಂಚರಿಸುತ್ತಿದ್ದಾರೆ. ವಿದ್ಯಾರ್ಥಿಗಳು, ಕೂಲಿಕಾರರು, ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಸಾರಿಗೆ ಇಲಾಖೆ ಕ್ರಮಗಳನ್ನು ಕೈಗೊ ಳ್ಳಲಿದೆ ಎಂದು ಹೇಳಿದರು.

ಈಗ ಪ್ರತಿಯೊಂದು ಬಸ್‌ಗೆ 19 ಲಕ್ಷ ವೆಚ್ಚವಾಗಿದ್ದು, ಹತ್ತು ಬಸ್‌ಗಳು ಸಂಚರಿಸಲಿದ್ದು, ಇನ್ನೂ 10 ಬಸ್ ಗಳನ್ನು ಅಳವಡಿಸುವುದಾಗಿ ತಿಳಿಸಿದ ಅವರು, ಕೋಲಾರ ನಗರದ ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣವನ್ನಾಗಿ ನಿರ್ಮಿಸಲು 2.15 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಅಶೋಕ್ ಹೇಳಿದರು.

ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಆರನೆ ತರಗತಿಯವರಿಗೂ ಉಚಿತ ಬಸ್ ಪಾಸ್ ನೀಡುತ್ತಿದ್ದು, ಇನ್ನು ಮುಂದೆ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ರಸ್ತೆ ಸಾರಿಗೆ ಇಲಾಖೆ ಹೆಚ್ಚು ಸೌಲ್ಯಗಳನ್ನು ನೀಡುವ ಬಗ್ಗೆ ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗು ವುದು ಎಂದು ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಒಟ್ಟು 30 ಸಾವಿರ ಬಸ್‌ಗಳನ್ನು ಹೊಂದಿದ್ದು ರಾಷ್ಟ್ರದಲ್ಲಿ ಪ್ರಥಮ ಹಾಗೂ ವಿಶ್ವದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಗಳಿಸಿದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಜವಳಿ ಖಾತೆ ಸಚಿವ ಆರ್.ವರ್ತೂರ್ ಪ್ರಕಾಶ್ ವಹಿಸಿ ಮಾತನಾಡುತ್ತಾ, ಕೋಲಾರ ನಗರ ಮತ್ತು ಗ್ರಾಮಾಂತರ ಠಾಣೆಗಳಿಗೆ ಹೊಸ ಕಟ್ಟಡಗಳನ್ನು ನಿರ್ಮಿಸಬೇಕು. ಹೊಸದಾಗಿ ನರಸಾಪುರ ಮತ್ತು ಸುಗಟೂರಿನಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ತೆರೆಯಬೇಕೆಂದು ಉಪಮುಖ್ಯಮಂತ್ರಿ ಯವರಲ್ಲಿ ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+