ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಲಹಂಕ ಶಾಸಕ ವಿಶ್ವನಾಥ್ ವಿಚಾರಣೆಗೆ ಲೋಕಾ ಸಜ್ಜು

By Srinath
|
Google Oneindia Kannada News

ಬೆಂಗಳೂರು, ಜುಲೈ 31: ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್‌ ಅವರ ಕೊರಳಿಗೆ ಲೋಕಾಯುಕ್ತದಿಂದ ತನಿಖಾ ಕೋಳ ಬಿಗಿಯಾಗುವ ಕಾಲ ಸನ್ನಿಹಿತವಾಗಿದೆ. ಶಾಸಕ ವಿಶ್ವನಾಥ್‌ ಅಕ್ರಮ ಆಸ್ತಿ ಸಂಪಾದಿಸಿರುವುದು ಸಾಬೀತಾಗಿದ್ದು, ಶೀಘ್ರದಲ್ಲೇ ಆರೋಪಪಟ್ಟಿ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಜ್ಜಾಗಿದ್ದಾರೆ.

ಈ ಮಧ್ಯೆ, ಪ್ರಕರಣದ ಸಂಬಂಧ ಅಂತಿಮ ಆರೋಪಪಟ್ಟಿ ದಾಖಲಿಸಲು ಲೋಕಾಯುಕ್ತ ಪೊಲೀಸರು ಇಂದು ಕಾಲಾವಕಾಶ ಕೋರಿದ್ದು, ಲೋಕಾಯುಕ್ತ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.

ಪ್ರಕರಣದ ಸಂಬಂಧ ಶಾಸಕ ವಿಶ್ವನಾಥರನ್ನು ವಿಚಾರಣೆಗೆ ಒಳಪಡಿಸಲು ಅವಕಾಶ ಕೋರಿ ಲೋಕಾಯುಕ್ತ ಪೊಲೀಸರು ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್‌ ಅವರ ವಿರುದ್ಧ ಒಟ್ಟು ಮೂರು ದೂರುಗಳು ದಾಖಲಾಗಿವೆ.

ಕಳೆದ ಫೆಬ್ರವರಿಯಲ್ಲಿ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ಪರಮಾಪ್ತ ಶಾಸಕ ಎಸ್ ಆರ್ ವಿಶ್ವನಾಥ್‌ ಅವರ ಬಂಧು ಬಳಗ, ಸ್ನೇಹಿತರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು.

ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ವಿ.ಶಶಿಧರ್ ಎಂಬವರು ಲೋಕಾಯುಕ್ತ ವಿಶೇಷ ನ್ಯಾಯಾಲದಯಲ್ಲಿ ಅಧಿಕಾರ ದುರುಪಯೋಗ ಹಾಗೂ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುಧೀಂದ್ರರಾವ್‌ರವರು ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯಕ್ತ ಪೊಲೀಸರಿಗೆ ಆದೇಶಿಸಿದ್ದರು.

English summary
Bangalore Lokayukta police had raided the residences of close relatives and friends of Yelahanka MLA, S R Vishwanath on Thursday (Feb 23) morning. Now the Lokayukta police seeks permission from Speaker KG Bopaiah to interrogate him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X