ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ LIVE

By Prasad
|
Google Oneindia Kannada News

Karnataka
ಬೆಂಗಳೂರು, ಜು. 31 : 2011-12ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ (ಸಪ್ಲಿಮೆಂಟರಿ) ಪರೀಕ್ಷೆ ಫಲಿತಾಂಶ ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಜು.31ರ ಮಂಗಳವಾರ ಮಧ್ಯಾಹ್ನ ಪ್ರಕಟವಾಗಿದೆ. ಫಲಿತಾಂಶ ಆಯಾ ಕಾಲೇಜುಗಳಲ್ಲಿ ಬುಧವಾರ ಬೆಳಿಗ್ಗೆ ಲಭ್ಯವಾಗಲಿದೆ.

ಜುಲೈ 3ರಿಂದ ಜುಲೈ 12ರವರೆಗೆ ಸಪ್ಲಿಮೆಂಟರಿ ಪರೀಕ್ಷೆಯನ್ನು ನಡೆಸಲಾಗಿತ್ತು. 2011-12ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಮೇ 23ರಂದು ಪ್ರಕಟವಾದ ಫಲಿತಾಂಶದಲ್ಲಿ ಶೇ.57.03ರಷ್ಟು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾತ್ರ ಉತ್ತೀರ್ಣರಾಗಿದ್ದರು.

ಹಿಂದಿನ ವರ್ಷಕ್ಕಿಂತ ಉತ್ತಮ ಫಲಿತಾಂಶ ಬಂದಿದ್ದರೂ ಭಾರೀ ಅನ್ನುವಂತಹ ಫಲಿತಾಂಶವೇನೂ ಬಂದಿರಲಿಲ್ಲ. ಆದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆದು, ಉತ್ತೀರ್ಣರಾದ ವಿದ್ಯಾರ್ಥಿಗಳು ಇದೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನಲ್ಲಿ ಸೀಟು ಪಡೆಯಲಿ ಎಂಬ ಉದ್ದೇಶದಿಂದ ಜುಲೈನಲ್ಲಿಯೇ ಪೂರಕ ಪರೀಕ್ಷೆ ನಡೆಸಲಾಗಿತ್ತು.

ಇದೇ ವರ್ಷದ ಮಾರ್ಚ್ 15ರಿಂದ ಏಪ್ರಿಲ್ 5ರವರೆಗೆ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಸುಮಾರು 6 ಲಕ್ಷದಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ ಕೇವಲ 3.4 ಲಕ್ಷ ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದರು. ಅವರಲ್ಲಿ ವಿದ್ಯಾರ್ಥಿನಿಯರೇ ವಿದ್ಯಾರ್ಥಿಗಳಿಗಿಂತ ಮೇಲುಗೈ ಪಡೆದಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

English summary
Department of Pre-University Education, Karnataka has announced results of 2nd PUC supplementary examination 2012 on the net on July 31, 2012. The supplementary examination was conducted for students who failed in the main PU Board examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X