• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಸಕ ವಿಶ್ವನಾಥ್ ಅಕ್ರಮ ಆಸ್ತಿ ಗಳಿಕೆ ಸಾಬೀತು: ಲೋಕಾ

By Srinath
|
yelahanka-mla-sr-vishwanath-lokayukta-file-charge-sheet
ಬೆಂಗಳೂರು, ಆಗಸ್ಟ್ 4: ಯಲಹಂಕದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್‌ ಅಕ್ರಮ ಆಸ್ತಿ ಗಳಿಸಿರುವುದು ನಿಜ. ನಿಗದಿತ ಆದಾಯಕ್ಕಿಂತ ಸುಮಾರು 4 ಪಟ್ಟು ಹೆಚ್ಚು ಆಕ್ರಮ ಆಸ್ತಿ ಸಂಪಾದಿಸಿದ್ದಾರೆ. ಇದಕ್ಕಾಗಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ವಿಶೇಷ ಕೋರ್ಟಿನಲ್ಲಿ ಶಾಸಕ ವಿಶ್ವನಾಥ್‌ ವಿರುದ್ಧ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದರಿಂದ ವಿಶ್ವನಾಥ್ ಬಂಧನವಾಗುವ ಸಾಧ್ಯತೆಯಿದೆ.

ಶಾಸಕ ವಿಶ್ವನಾಥ್‌ ಅಕ್ರಮ ಆಸ್ತಿ ಸಂಪಾದಿಸಿರುವುದು ಸಾಬೀತಾಗಿದೆ. ಮುಖ್ಯವಾಗಿ ಎಚ್ಎಎಲ್ ನಲ್ಲಿ ಉದ್ಯೋಗಿಯಾಗಿದ್ದುಕೊಂಡು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದಾರೆ. ಸುಳ್ಳು ಮಾಹಿತಿ ನೀಡಿ 'ಜಿ' ಕೆಟಗರಿ ಸೈಟ್ ಪಡೆದಿದ್ದಾರೆ. ವಿಶ್ವಾನಾಥ್ ಸುಮಾರು 40 ಕೋಟಿ ರು. ಆಸ್ತಿವಂತರಾಗಿದ್ದಾರೆ.

ಇನ್ನು, ಪತ್ನಿಯ ಹೆಸರಿನಲ್ಲಿ ಪೆಟ್ರೋಲ್ ಬಂಕ್ ಮತ್ತಿತರ ಆಸ್ತಿ ಮಾಡಿದ್ದಾರೆ. ಬೇನಾಮಿಯಾಗಿ ವಿದೇಶಿ ಕಾರು ಹೊಂದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಾವು ಸಲ್ಲಿಸಿರುವ 5 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ದಾಖಲಿಸಿದ್ದಾರೆ. ಲೊಕಾಯುಕ್ತ ನ್ಯಾಯಾಲಯ ಪ್ರಕರಣವನ್ನು ಆಗಸ್ಟ್ 31ಕ್ಕೆ ಮುಂದೂಡಿದೆ.

ಪ್ರಕರಣದ ಸಂಬಂಧ ಅಂತಿಮ ಆರೋಪಪಟ್ಟಿ ದಾಖಲಿಸಲು ಲೋಕಾಯುಕ್ತ ಪೊಲೀಸರು ಕಳೆದ ತಿಂಗಳು ಕಾಲಾವಕಾಶ ಕೋರಿದ್ದರಿಂದ ಲೋಕಾಯುಕ್ತ ಕೋರ್ಟ್ ವಿಚಾರಣೆಯನ್ನು ಇಂದಿಗೆ (ಆಗಸ್ಟ್ 4) ಮುಂದೂಡಿತ್ತು.

ಈಗಾಗಲೇ, ಪ್ರಕರಣದ ಸಂಬಂಧ ಶಾಸಕ ವಿಶ್ವನಾಥರನ್ನು ವಿಚಾರಣೆಗೆ ಒಳಪಡಿಸಲು ಅವಕಾಶ ಕೋರಿ ಲೋಕಾಯುಕ್ತ ಪೊಲೀಸರು ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್‌ ಅವರ ವಿರುದ್ಧ ಒಟ್ಟು ಮೂರು ದೂರುಗಳು ದಾಖಲಾಗಿವೆ.

ಕಳೆದ ಫೆಬ್ರವರಿಯಲ್ಲಿ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪನವರ ಪರಮಾಪ್ತ ಶಾಸಕರಾದ ಎಸ್ ಆರ್ ವಿಶ್ವನಾಥ್‌ ಅವರ ಬಂಧು ಬಳಗ, ಸ್ನೇಹಿತರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು.

ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ವಿ.ಶಶಿಧರ್ ಎಂಬವರು ಲೋಕಾಯುಕ್ತ ವಿಶೇಷ ನ್ಯಾಯಾಲದಯಲ್ಲಿ ಅಧಿಕಾರ ದುರುಪಯೋಗ ಹಾಗೂ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುಧೀಂದ್ರರಾವ್‌ರವರು ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯಕ್ತ ಪೊಲೀಸರಿಗೆ ಆದೇಶಿಸಿದ್ದರು.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bangalore Lokayukta police had raided the residences of close relatives and friends of Yelahanka MLA, S R Vishwanath on Thursday (Feb 23) morning. Today the Lokayukta police have filed charge sheet against him.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more