ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ಅರ್ಜಿ ವಜಾ: ಯಡಿಯೂರಪ್ಪ ಸುಪ್ರೀಂ ಸಮಾಧಾನ

By Srinath
|
Google Oneindia Kannada News

illegal-mining-sc-reject-cbi-appeal-against-yeddyurappa
ನವದೆಹಲಿ, ಆ. 6: ಗಣಿ ಲಂಚ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಇದರಿಂದ ಯಡಿಯೂರಪ್ಪ ನಿಟ್ಟುಸಿರುಬಿಟ್ಟಿದ್ದಾರೆ.

ಸಿಬಿಐ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ಆ ವಿಚಾರವನ್ನು ಹೈಕೋರ್ಟಿನಲ್ಲೇ ಇತ್ಯರ್ಥಪಡಿಸಿಕೊಳ್ಳಿ ಎಂದು ನ್ಯಾಯಮೂರ್ತಿಗಳಾದ ಟಿಎಸ್ ಠಾಕೂರ್ ಮತ್ತು ಇಬ್ರಾಹಿಂ ಖಲೀಫುಲ್ಲಾ ಅವರ ನ್ಯಾಯಪೀಠ ಸೂಚಿಸಿದೆ. ಇದರಿಂದ ಯಡಿಯೂರಪ್ಪ ಅವರನ್ನು ಬಂಧಿಸಿ, ವಿಚಾರಣೆಗೆ ಗುರಿಪಡಿಸುವ ಸಿಬಿಐ ಪ್ರಯತ್ನ ಗಗನಕುಸುಮವಾಗಿದೆ.

ಗಣಿ ದೇಣಿಗೆ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪರಿಗೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಸುಭಾಷ್‌ ಆದಿ ಅವರ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ, 'ಯಡಿಯೂರಪ್ಪ ಈ ಪ್ರಕರಣದ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಆದ್ದರಿಂದ ಅವರ ಜಾಮೀನನ್ನು ರದ್ದುಗೊಳಿಸಬೇಕು' ಎಂದು ಸಿಬಿಐ ಪರ ವಕೀಲ ಮೋಹನ್ ಪರಶರಣ್ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಾಲಯ ಸಿಬಿಐಯ ಮೇಲ್ಮನವಿಯನ್ನು ರದ್ದುಗೊಳಿಸಿ, ಹೈಕೋರ್ಟಿಗೇ ವಾಪಸ್ ಹೋಗಿ ಎಂದು ಸೂಚಿಸಿದೆ.

ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಸಮಾಧಾನ ವ್ಯಕ್ತಪಡಿಸಿರುವ ಬಿ ಎಸ್ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ತಾನು ಮತ್ತು ತನ್ನ ಕುಟುಂಬದವರು ಸಂಪೂರ್ಣವಾಗಿ ಸಹಕರಿಸುವುದಾಗಿ ಪ್ರತಿಕ್ರಿಯಿಸಿದ್ದಾರೆ.

English summary
Illegal mining- Supreme Court rejects CBI appeal against BS Yeddyurappa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X