ಪುರಭವನದಲ್ಲಿ ಎಸ್ಪಿಬಿಗೆ 'ಆದರ್ಶರತ್ನ' ಪ್ರಶಸ್ತಿ ಪ್ರದಾನ

ಭಾರತದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 'ಆದರ್ಶ ವಾರ್ಷಿಕ ಪುರಸ್ಕಾರ'ವನ್ನು ಹಿರಿಯ ಗಿಟಾರ್ ವಾದಕ ಮತ್ತು ಸಂಯೋಜಕ ಬಂಟಪಲ್ಲಿ ಸುದರ್ಶನ್ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಕನ್ನಡದ ಹೆಮ್ಮೆಯ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಜೆಡಿಎಸ್ ಪಕ್ಷದ ಚೆಲುವರಾಯಸ್ವಾಮಿ, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು, ಖ್ಯಾತ ಸುಗಮ ಸಂಗೀತ ಗಾಯಕ ಡಾ. ಶಿವಮೊಗ್ಗ ಸುಬ್ಬಣ್ಣ, ವಿಧಾನ ಪರಿಷತ್ ಸದಸ್ಯ ಮತ್ತು ಚಲನಚಿತ್ರ ಸಾಹಿತಿ ಡಾ. ದೊಡ್ಡರಂಗೇಗೌಡ, ಸಾಯಿ ಗೋಲ್ಡ್ ಪ್ಯಾಲೇಸ್ ಮಾಲಿಕ ಟಿ.ಎ. ಶರವಣ ಅವರು ಮುಖ್ಯ ಅತಿಥಿಗಳಾಗಿ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕಳೆದ 17 ವರ್ಷಗಳಿಂದ ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ವತಿಯಿಂದ 'ಆದರ್ಶರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಆದರ್ಶ ಸುಗಮ ಸಂಗೀತ ಅಕಾಡೆಮಿ ಮತ್ತು ಸಾಯಿ ಗೋಲ್ಡ್ ಪ್ಯಾಲೇಸ್ ಜಂಟಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸುಗಮ ಸಂಗೀತ ಹಾಗೂ ವಾದ್ಯ ಸಂಗೀತ ರಸಸಂಜೆಯನ್ನು ಅರ್ಪಿಸುತ್ತಿವೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಮತ್ತು ಸಂಗೀತಾಕ್ತರು ನಂ.22, 2ನೇ ಮಹಡಿ, ಶಾಪ್ ಸ್ಟ್ರೀಟ್, ಬಸವನಗುಡಿ, ಬೆಂಗಳೂರು ವಿಳಾಸದಲ್ಲಿರುವ ಆದರ್ಶ ಸುಗಮ ಸಂಗೀತ ಅಕಾಡೆಮಿಯಲ್ಲಿ ಉಚಿತ ಪಾಸ್‌ಗಳನ್ನು ಪಡೆಯಬಹುದಾಗಿದೆ. ಮೊ : 94480 46816, ದೂ : 080 26679081 ಸಂಪರ್ಕಿಸಬಹುದು. ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿರುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications