ರಾಶಿಗಟ್ಟಲೆ SMS, MMS ಗೆ ನಿಷೇಧ

ಸ್ವಾತಂತ್ರೋತ್ಸವ ದಿನಾಚರಣೆ ದಿನದಂದು ಈಗೊಂದು ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂಬ ಸುದ್ದಿ ಹಬ್ಬಿತ್ತು. ಈಗ ಅದರಂತೆ, ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ಜನರ ಭೀತಿಗೆ ಕಾರಣವಾಗಿರುವ ಸಾಮಾಜಿಕ ಜಾಲ ತಾಣಗಳು ಹಾಗೂ ಮೊಬೈಲ್ ಸಂದೇಶಗಳ ಮೇಲೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
Bulk sms, mms banned ಎಂದು ಸರ್ಕಾರ ಘೋಷಿಸಿದೆ.
ಸಾಮಾಜಿಕ ಭದ್ರತೆಗೆ ಧಕ್ಕೆ ತರುವ ಸಂದೇಶ ಹರಡಲು ವೇದಿಕೆಯಾಗಿ ಗಲಭೆ ಹಬ್ಬಲು ಕಾರಣವಾಗಿರುವ ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್, ಟ್ವಿಟರ್ ಗಳನ್ನು ಕೆಲ ದಿನಗಳ ಮಟ್ಟಿಗೆ ನಿಷೇಧಿಸುವಂತೆ ಮಹಾರಾಷ್ಟ್ರ ಗೃಹ ಸಚಿವ ಆರ್ ಆರ್ ಪಾಟೀಲ್ ಹಾಗೂ ಸಮಾಜವಾದಿ ಪಕ್ಷದ ಸಂಸದ ರಾಮ ಗೋಪಾಲ್ ಯಾದವ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಬೆಂಗಳೂರು ಅಷ್ಟೇ ಅಲ್ಲದೆ ಪುಣೆ, ಹೈದರಾಬಾದ್, ಚೆನ್ನೈ ಹಾಗೂ ಭಾರತದ ಇತರೆ ನಗರಗಳಿಂದ ಈಶಾನ್ಯ ಭಾರತ ಮೂಲದ ಜನರು ತಮ್ಮ ಊರಿಗೆ ವಾಪಸ್ ಹೋಗುತ್ತಿರುವುದು ಶುಕ್ರವಾರ ಕೂಡಾ ಮುಂದುವರೆದಿದೆ.
ಭದ್ರತೆಯ ಭರವಸೆ ಕೊಡುವ ಮೊದಲು ಸುಳ್ಳು ಸುಳ್ಳು ಸಂದೇಶಗಳನ್ನು ಹರಡುವ ಮಾರ್ಗಗಳನ್ನು ಬಂದ್ ಮಾಡಬೇಕು. ಇಲ್ಲದಿದ್ದರೆ ಅನ್ಯಧರ್ಮೀಯರು ಸಂದೇಶ ಕಳಿಸಿ ಶಾಂತಿ ಕದಡುತ್ತಿದ್ದಾರೆ ಎಂಬ ತಪ್ಪು ಸಂದೇಶ ನೀಡಿದ್ದಂತಾಗುತ್ತದೆ ಎಂದಿದ್ದಾರೆ.
ಎಸ್ ಎಂಎಸ್ ಗಳ ಮೂಲಕ ವದಂತಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳ ಜನತೆ ಭಯಭೀತರಾಗಿ ತಮ್ಮೂರಿಗೆ ಹೋಗುತ್ತಿದ್ದಾರೆ ಎಂಬುದು ದೃಢಪಟ್ಟಿರುವುದರಿಂದ ಕೇಂದ್ರ ಗೃಹ ಸಚಿವಾಲಯ ಎಸ್ಎಂಎಸ್ ನಿಷೇಧದ ನಿರ್ಣಯ ಕೈಗೊಂಡಿದೆ.
ಮೊಬೈಲ್ ಸಂದೇಶಗಳ ನಿಷೇಧದ ಮುಂದಿನ ಭಾಗವಾಗಿ ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ಹಾಗೂ ಟ್ವಿಟರ್ ಗಳನ್ನು ಕೆಲ ದಿನಗಳ ಮಟ್ಟಿಗೆ ನಿಷೇಧ ಹೇರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಅಖಿಲ ಭಾರತ ಯುನೈಟೆಡೆ ಡೆಮಾಕ್ರೆಟಿಕ್ ಫ್ರಂಟ್‌ನ ಅಧ್ಯಕ್ಷ ಬದಾರುದ್ದಿನ್ ಅಜ್ಮಲ್ ಎಂಬಾತನೇ ಬೆಂಗಳೂರು ಮತ್ತಿತರ ರಾಜ್ಯಗಳಲ್ಲಿರುವ ಅಸ್ಸಾಂ ವಿದ್ಯಾರ್ಥಿಗಳಲ್ಲಿ ಭೀತಿಯನ್ನು ಬಿತ್ತುತ್ತಿದ್ದಾನೆ ಎಂದು ಆರೋಪಿಸಿರುವುದು ಫಸ್ಟ್ ಪೋಸ್ಟ್ ತಾಣದಲ್ಲಿ ವರದಿಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications