ಜೋಳದರಾಶಿ ಶಾಂತಾ ಸಂಸತ್ ಸದಸ್ಯತ್ವ ಸೆ.15ಕ್ಕೆ ಕೊನೆ?

ಮತ ಮರುಎಣಿಕೆ: ಏನಪಾ ಅಂತಹ ಆತಂಕದ ವಿಚಾರವೆಂದರೆ ಬಿಜೆಪಿ ಪಕ್ಷದ ಜೆ. ಶಾಂತಾರ ಸಂಸತ್ ಸದಸ್ಯತ್ವ ಸೆ. 15ಕ್ಕೆ ಕೊನೆಗೊಳ್ಳುವ ಎಲ್ಲ ಸಾಧ್ಯತೆಗಳೂ ಇವೆ. ಏಕೆಂದರೆ, ಬಳ್ಳಾರಿ ಲೋಕಸಭಾ ಕ್ಷೇತ್ರದ ಮತಗಳ ಮರುಎಣಿಕೆ ಕಾರ್ಯವನ್ನು ಕೋರ್ಟ್ ಆದೇಶದಂತೆ ಸೆಪ್ಟೆಂಬರ್ 15ರಂದು ನಡೆಸಲು ಅವಕಾಶ ನೀಡುವಂತೆ ಜಿಲ್ಲಾಡಳಿತವು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಮತಗಳ ಮರುಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್ ತೀರ್ಪನ್ನು ಸಂಸದೆ ಶಾಂತಾ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ ಮೇಲ್ಮನವಿಯನ್ನು ತಿರಸ್ಕರಿಸಿಸ ಸುಪ್ರೀಂಕೋರ್ಟ್, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿಯಿತು. ಅಲ್ಲದೇ, ಹೈಕೋರ್ಟ್ ಬಯಸಿರುವಂತೆ ನಾಲ್ಕು ವಾರಗಳೊಳಗೆ ಮರು ಮತಎಣಿಕೆ ಮಾಡುವಂತೆಯೂ ತಿಳಿಸಿತ್ತು.
ಈ ಹಿನ್ನೆಲೆಯಲ್ಲಿ ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸಲಾಗಿದ್ದು, ಸೆಪ್ಟೆಂಬರ್ 15 ರಂದು ಮರುಎಣಿಕೆ ನಡೆಸಲು ಅನುಮತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.
2009ರ ಏಪ್ರಿಲ್‌ನಲ್ಲಿ ನಡೆದಿದ್ದ 13ನೇ ಲೋಕಸಭೆ ಚುನಾವಣೆಯಲ್ಲಿ 2,243 ಮತಗಳ ಅಂತರದಿಂದ ಕಾಂಗ್ರೆಸ್‌ನ ಎನ್.ವೈ. ಹನುಮಂತಪ್ಪ ಸೋತಿದ್ದರು. ದಿಢೀರನೆ ಗೊಂದಲದ ವಾತಾವರಣ ಮೂಡಿದಾಗ ಕೊನೆಯ ಎರಡು ಸುತ್ತಿನ ಎಣಿಕೆ ಕಾರ್ಯ ನಡೆಸದೆಯೇ ಫಲಿತಾಂಶ ಘೋಷಿಸಲಾಗಿತ್ತು. ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಏಜೆಂಟ್ ಆಗಿದ್ದ ಚಂದ್ರಗೌಡ ಎಂಬುವವರು ಅಕ್ರಮ ನಡೆದಿರುವ ಕುರಿತು ಹೈಕೋರ್ಟ್‌ಗೆ ದೂರು ಸಲ್ಲಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications