ನರಮೇಧ: ಗುಜರಾತಿನ ಮಾಜಿ ಸಚಿವೆಗೆ ಸಜೆ

Maya Kodnani
ಅಹಮದಾಬಾದ್, ಆ.29: ಗೋಧ್ರಾ ಹತ್ಯಾಕಾಂಡದ ಬಳಿಕ ನಡೆದ ಹಿಂಸಾಚಾರ ಪ್ರಕರಣವಾದ ನರೋಡಾ ಪಾಟಿಯಾ ಹತ್ಯಾಕಾಂಡ ಕೇಸಿಗೆ ಸಂಬಂಧಿಸಿದಂತೆ ಬುಧವಾರ(ಆ.29) ಮಹತ್ವದ ತೀರ್ಪು ಹೊರಬಿದ್ದಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶೆ ಜ್ಯೋತ್ಸ್ನಾಯಾಗ್ನಿಕ್ ಅವರು ಮಾಜಿ ಸಚಿವೆ ಮಾಯಾ ಕೊಡ್ನಾನಿ ಹಾಗೂ ಮಾಜಿ ಬಜರಂಗ ದಳ ಮುಖಂಡ ಬಾಬು ಬಜರಂಗಿ ಹಾಗೂ ಇತರರು ಸೇರಿದಂತೆ 32 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದಾರೆ. ಆದರೆ, ನ್ಯಾ ಜ್ಯೋತ್ಸ್ನಾಶಿಕ್ಷೆ ಪ್ರಮಾಣವನ್ನು ಇನ್ನೂ ಪ್ರಕಟಿಸಿಲ್ಲ

ನರೋಡಾ ಪಾಟಿಯಾ ಹತ್ಯಾಕಾಂಡ ಘಟನೆಯಲ್ಲಿ 97 ಮುಸ್ಲಿಮರ ಹತ್ಯೆಯಾಗಿತ್ತು. ಘಟನೆಗೆ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು.

ಹೆಚ್ಚುವರಿ ಮುಖ್ಯ ನ್ಯಾಯಾಧೀಶೆ ಜ್ಯೋತ್ಸ್ನಾ ಯಾಜ್ಞಿಕ್ ಅವರು ಕಳೆದ ತಿಂಗಳು ವಿಚಾರಣೆಯನ್ನು ಪೂರ್ತಿಗೊಳಿಸಿದ್ದು, ತೀರ್ಪನ್ನು ಬುಧವಾರ(ಆ.29)ಕ್ಕೆ ಕಾಯ್ದಿರಿಸಿದ್ದರು.

ಮೋದಿ ಸರ್ಕಾರ ಮಾಜಿ ಸಚಿವೆ(ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ) ಹಾಗೂ ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದರು.

ಗೋಧ್ರಾ ಹತ್ಯಾಕಾಂಡದ ಬಳಿಕ ನಡೆದ ಹಿಂಸಾಚಾರದಲ್ಲಿ ಈ ಘಟನೆ ನಡೆದಿತ್ತು. ಪ್ರಕರಣದ ವಿಚಾರಣೆ 2009ರ ಆಗಸ್ಟ್ ನಲ್ಲಿ ಪ್ರಾರಂಭವಾಗಿತ್ತು. ಗೋಧ್ರಾ ರೈಲು ದುರಂತದ ಮರು ದಿನ ನಗರದ ನರೋಡಾ ಪಾಟಿಯಾ ಪ್ರದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ 97 ಜನರನ್ನು ಉದ್ರಿಕ ಗುಂಪೊಂದು ಹತ್ಯೆ ಮಾಡಿತ್ತು. ಸಬರಮತಿ ರೈಲು ದುರಂತ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಂದ್‌ಗೆ ಕರೆ ನೀಡಿದ್ದ ವೇಳೆಯಲ್ಲಿ ಈ ಹತ್ಯಾಕಾಂಡ ನಡೆದಿತ್ತು.

94 ಮೃತ ದೇಹಗಳಲ್ಲಿ 84 ಶವಗಳ ಗುರುತು ಪತ್ತೆಯಾಗಿತ್ತು. ಉಳಿದ ಶವಗಳ ಪತ್ತೆಯಾಗಿರಲಿಲ್ಲ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(SIT)ಗೆ ವಹಿಸಲಾಗಿತ್ತು. ಒಟ್ಟು 8 ಛಾರ್ಜ್ ಶೀಟ್ ಗಳನ್ನು ಈ ಪ್ರಕರಣದಲ್ಲಿ ಸಲ್ಲಿಸಲಾಗಿದೆ.

ಈ ಪ್ರಕರಣದ ಆರೋಪಿಗಳಾಗಿದ್ದ ತೇಜಸ್ ಪಾಠಕ್ ಹಾಗೂ ಮೋಹನ್ ನೇಪಾಳಿ ಅವರು ಜಾಮೀನಿನ ಮೇಲೆ ಹೊರಬಿದ್ದಿದ್ದಾರೆ. ವಿಚಾರಣಾ ಅವಧಿಯಲ್ಲಿ 8 ಆರೋಪಿಗಳು ಮೃತಪಟ್ಟಿದ್ದಾರೆ. ಒಬ್ಬನ ಖುಲಾಸೆಯಾಗಿದ್ದು ಹಾಗೂ ವಿನೋದ್ ಮರಾಠೆ ಎಂಬ ಆರೋಪಿ ನಾಪತ್ತೆಯಾಗಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+