• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

12 ಬೇಡ 2 ಸಾವಿರ ಕೋಟಿ ಕೊಡ್ಸಿ ನೋಡೋಣ

By Mahesh
|
ಮೈಸೂರು,ಆ.30: ರಾಜ್ಯದ ಬರ ಪೀಡಿತ ನೆರವಿಗಾಗಿ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸುವುದನ್ನು ಬಿಟ್ಟು, ಬಿಜೆಪಿ ಬರ ಪ್ರವಾಸವನ್ನು ಟೀಕೆಸುವುದರಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಬರ ಪರಿಹಾರಕ್ಕಾಗಿ 12 ಸಾವಿರ ಕೋಟಿ ಮನವಿ ಮಾಡಲಾಗಿದೆ. ಶಕ್ತಿ ಇದ್ದರೆ ಕಾಂಗ್ರೆಸ್ಸಿಗರು ಅದರಲ್ಲಿ 2 ಸಾವಿರ ಕೋಟಿ ಕೊಡಿಸುವ ಮನಸ್ಸು ಮಾಡಲಿ ಎಂದು ಯಡಿಯೂರಪ್ಪ ಸವಾಲು ಎಸೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬರ ಅಧ್ಯಯನ ಪ್ರವಾಸ ನಿರತರಾಗಿರುವ ಬಿಎಸ್ ಯಡಿಯೂರಪ್ಪ ಅವರು ಮಾತನಾಡುತ್ತಾ, ಕಾಂಗ್ರೆಸ್ ನಾಯಕರು ಜನರ ನೋವಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕೇಂದ್ರದಲ್ಲಿರುವ ರಾಜ್ಯದ ಪ್ರತಿನಿಧಿಗಲಾದ ಎಸ್ ಎಂ ಕೃಷ್ಣ, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ ಹಾಗೂ ವೀರಪ್ಪ ಮೊಯ್ಲಿ ಯಾವುದೇ ಚಕಾರ ಎತ್ತಿಲ್ಲ

ಕೇಂದ್ರದ ಸೂಚನೆ ಮೇರೆಗೆ ಕರ್ನಾಟಕ ಸರ್ಕಾರ 12 ಸಾವಿರ ಕೋಟಿ ರು ನೆರವಿಗೆ ಅಂಗಲಾಚಿ ಎರಡು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆವಿಗೂ ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ಹಣ ಬಿಡುಗಡೆ ಮಾಡಿಲ್ಲ ಎಂದು ಯಡಿಯೂರಪ್ಪ ಟೀಕಿಸಿದ್ದಾರೆ.

ರೈತರ ಪರವಾಗಿ ಬಿಜೆಪಿ ಕೈಗೊಂಡಿರುವ ಕ್ರಮಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಕಾಂಗ್ರೆಸ್ಸಿಗರು ಸುಖಾಸುಮ್ಮನೆ ನಮ್ಮನ್ನು ಟೀಕಿಸುವ ಬದಲು ರೈತರ ಸಾಲ ಮನ್ನಾ ಮಾಡಿರುವ 3,500 ಕೋಟಿ ಮೊದಲು ಕೊಟ್ಟು ಆಮೇಲೆ ಮಾತನಾಡಲಿ ಎಂದು ಯಡಿಯೂರಪ್ಪ ಸವಾಲು ಹಾಕಿದರು.

ಇದು ಬರ ಅಧ್ಯಯನ ಪ್ರವಾಸ, ಚುನಾವಣೆ ಪ್ರವಾಸವಲ್ಲ. ಜನರ ಕಷ್ಟ ಅರಿಯುವುದು ಅವರಿಗೆ ಕೈಲಾದಷ್ಟು ಸಹಾಯ ಮಾಡುವುದು ನೆರವಿನ ದಾರಿ ತೋರಿಸುವುದು ನನ್ನ ಉದ್ದೇಶ ಎಂದು ಯಡಿಯೂರಪ್ಪ ಹೇಳಿದರು.
ಮೊದಲ ಹಂತದ ಬರ ಪ್ರವಾಸ ಮುಗಿಯುತ್ತಿದ್ದಂತೆ ಬೆಂಗಳೂರಿಗೆ ಮರಳಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಮಲ್ಲೇಶ್ವರಂನ ಮೈದಾನದಲ್ಲಿ ನಡೆದ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡಿದ್ದರು.

ರಾಜ್ಯ ಕಲ್ಯಾಣ, ಸಮೃದ್ಧವಾಗಿ ಮಳೆ ಬೆಳೆ, ಜನರ ಯೋಗ ಕ್ಷೇಮಕ್ಕಾಗಿ ಪ್ರಾರ್ಥಿಸಲು ನಾನು ಈ ಯಾಗದಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಇನ್ನೊಂದೆಡೆ ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರ ಬರ ಅಧ್ಯಯನ ಪ್ರವಾಸ ಜಾರಿಯಲ್ಲಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್‌ ನೇತೃತ್ವದ ತಂಡ ಸೆ. 8 ಮತ್ತು 9ರ ನಂತರ ಡಿವಿಎಸ್ ತಂಡ ಸೇರುವ ಸಾಧ್ಯತೆಯಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ಯಡಿಯೂರಪ್ಪ ಸುದ್ದಿಗಳುView All

English summary
Yeddyurappa takes on Siddaramaiah and other congress leader by challenging them to pay back Rs 3500 Cr farmers' debt that BJP government has waived off. BSY is under drought studdy tour in Mysore

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more